ಹುಬ್ಬಳ್ಳಿ: ಸಾರ್ವಜನಿಕ ಕಾರ್ಯಕ್ರಮದ ವೇದಿಕೆ ಮೇಲೆಯೇ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಾಳಿತ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಹಾಗೂ ಬೃಹತ್ ಪ್ಲಾಸ್ಟಿಕ್ ಸಂಗ್ರಹಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಪ್ರಹ್ಲಾದ್ ಜೋಷಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಅವರನ್ನು ತರಾಟೆಗೆ ತಗೆದುಕೊಂಡರು. ಇದನ್ನೂ ಓದಿ: ಪ್ರಧಾನಿ ಅಮೆರಿಕಕ್ಕೆ ಹೋಗಿದ್ದರಿಂದ ನೆರೆ ಪರಿಹಾರ ಪ್ರಕಟಿಸಲು ತಡವಾಗಿದೆ – ಪ್ರಹ್ಲಾದ್ ಜೋಷಿ
Advertisement
Advertisement
ಇಷ್ಟು ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದರ ಬಗ್ಗೆ ನನಗೆ ಯಾಕೆ ಮಾಹಿತಿ ನೀಡಿಲ್ಲ? ಅಷ್ಟೇ ಅಲ್ಲದೆ ಇಷ್ಟು ದೊಡ್ಡ ಕಾರ್ಯಕ್ರಮ ಮಾಡಿದರೂ ಸರಿಯಾದ ವ್ಯವಸ್ಥೆ ಮಾಡಿಲ್ಲ. ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ? ನಿಮಗೆ ಅರ್ಥ ಆಗಲ್ವಾ ಎಂದು ಕೇಂದ್ರ ಸಚಿವರು ವೇದಿಕೆ ಮೇಲೆ ತರಾಟೆ ತೆಗೆದುಕೊಂಡರು.
Advertisement
ಜಿಲ್ಲಾಧಿಕಾರಿ ದೀಪಾ ಚೋಳನ್ ಸಮಜಾಯಿಸಿ ನೀಡಲು ಅವಕಾಶ ನೀಡದೆ ಕೇಂದ್ರ ಸಚಿವರು ಮನಬಂದಂತೆ ಬೈದಿದ್ದಾರೆ. ಕೇಂದ್ರ ಸಚಿವರು ಅಷ್ಟಕ್ಕೆ ಸುಮ್ಮನಾಗದೆ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರನ್ನು ಕರೆದು ತರಾಟೆಗೆ ತಗೆದುಕೊಂಡರು. ಇದೆಲ್ಲವನ್ನು ನೋಡುತ್ತ ಮಧ್ಯದಲ್ಲಿ ಕುಳಿತಿದ್ದ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಯಾರಿಗೂ ಏನನ್ನೂ ಹೇಳದೆ ಮೌನಕ್ಕೆ ಶರಣಾಗಿದ್ದರು.