ಧಾರವಾಡ: ಭೂ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಬಸವರಾಜ್‌ಗೆ ಧಾರವಾಡ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸಚಿವರಿಗೆ ಜಾರಿಗೊಳಿಸಿದ್ದ ಸಮನ್ಸ್‌ಗೆ ಧಾರವಾಡ ಹೈಕೋರ್ಟ್ ತಡೆ ನೀಡಿದೆ.
Advertisement
2003ರಲ್ಲಿ ಬೈರತಿ ಬಸವರಾಜ್ ಬೆಂಗಳೂರಿನ ಕೆ.ಆರ್.ಪುರಂ ಹೋಬಳಿಯ ಕಲ್ಕೆರೆಯಲ್ಲಿ ಅಣ್ಣಯ್ಯಪ್ಪ ಎಂಬವರಿಂದ 22 ಏಕರೆ ಜಮೀನನ್ನು ಖರೀದಿಸಿ ಖಾಲಿ ಕಾಗದದ ಮೇಲೆ ಸಹಿ ಪಡೆದು ವಂಚಿಸಿದ್ದರು ಎಂದು ಗಂಭೀರ ಆರೋಪ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಮಾದಪ್ಪ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ʻಬಿʼ ರಿಪೋರ್ಟ್ ಹಾಕಿ ಪ್ರಕರಣ ಮುಚ್ಚಿಹಾಕಿದ್ದರು. ಇದನ್ನು ಪ್ರಶ್ನಿಸಿ ಮಾದಪ್ಪ, ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪದ ಜಾಲದ ಮೇಲೆ ಅಧಿಕಾರಿಗಳ ದಾಳಿ
Advertisement
Advertisement
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಬೈರತಿ ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿತ್ತು. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬೈರತಿ ಬಸವರಾಜ್‌ಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಬೈರತಿ ಬಸವರಾಜ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಇದರ ವಿಚಾರಣೆ ಕೈಗೆ ಎತ್ತಿಕೊಂಡು ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ, ಸಮನ್ಸ್ ಜಾರಿ ಮಾಡಿದ್ದಕ್ಕೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನು ಜನವರಿ ಎರಡನೇ ವಾರಕ್ಕೆ ಮುಂದೂಡಿದೆ. ಇದನ್ನೂ ಓದಿ: ಜೂಜಾಡುತ್ತಿದ್ದ ಎಎಸ್‌ಐ, ಕಾನ್‌ಸ್ಟೇಬಲ್, ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿ ಅರೆಸ್ಟ್