ಧಾರವಾಡ: ಅಧಿಕ ಬಡ್ಡಿ ನೀಡುವುದಾಗಿ ಜನರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ ಹರ್ಷಾ ಎಂಟಪ್ರ್ರೈಸಸ್ ಮಾಲೀಕರಾದ ಖಾಸನೀಸ್ ಸಹೋದರರಿಗೆ ಸೇರಿದ ಆಸ್ತಿಯನ್ನು ಧಾರವಾಡ ಉಪವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ಜಪ್ತಿ ಮಾಡಲಾಯಿತು.
ಹುಬ್ಬಳ್ಳಿಯ ಬೈರಿದೇವರಕೊಪ್ಪ ಬಳಿಯ 1 ಗುಂಟೆಯಲ್ಲಿರುವ ಪ್ಲಾಟ್ ಜಪ್ತಿ ಮಾಡಿದ್ದಾರೆ. ಧಾರವಾಡ ಉಪವಿಭಾಗ ಅಧಿಕಾರಿ ಮಹ್ಮದ್ ಜುಬೇರ್ ಹಾಗೂ ತಹಶೀಲ್ದಾರ್ ಶಶೀಧರ ಮಾಡ್ಯಾಳ ನೇತೃತ್ವದಲ್ಲಿ ಜಪ್ತಿ ಮಾಡಿದ್ದಾರೆ.
Advertisement
Advertisement
ಕಲಘಟಗಿಯಲ್ಲಿ ಹರ್ಷಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳನ್ನು ಖಾಸನೀಸ್ ಸಹೋದರರಾದ ಸತ್ಯಭೋದ ಖಾಸ್‍ನೀಸ್, ಸಂಜೀವ ಖಾಸನೀಸ್ ಹಾಗೂ ಶ್ರೀಕಾಂತ್ ಖಾಸ್‍ನೀಸ್ ಎಂಬವರು ವಂಚನೆ ಮಾಡಿದ್ದು, 2017 ರಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು.
Advertisement
Advertisement
ಈ ಪ್ರಕರಣವನ್ನು ಸಿಐಡಿ ಸಂಸ್ಥೆಯಿಂದ ಕೂಡ ತನಿಖೆ ಕೈಗೊಳ್ಳಲಾಗಿತ್ತು. ಸಿಐಡಿ ವರದಿಯಲ್ಲಿ ಉಲ್ಲೇಖಿತ ಆಸ್ತಿಗಳನ್ನು ಜಪ್ತಿ ಮಾಡಲಾಗುತ್ತಿದ್ದು, ಹುಬ್ಬಳ್ಳಿ, ಕಲಘಟಗಿ, ಹಾಗೂ ಬಳ್ಳಾರಿಯಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ.