Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
Last updated: April 22, 2026 8:26 pm
Public TV
Share
3 Min Read
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
SHARE

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ(Vinay Kulkarni) ಮತ್ತು ತಂಡದವರು ಭಾಗಿಯಾಗಿರುವ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ(Yogesh Gowda Murder Case) ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ (Judge Santosh Gajanan Bhat) ಅವರು ಉಪನಿಷತ್ ಉಲ್ಲೇಖಮಾಡಿ ಕಾನೂನನ್ನು ‘ಧರ್ಮʼಕ್ಕೆ ಹೋಲಿಸಿದ್ದಾರೆ.

ನ್ಯಾಯಾಧೀಶರು ನೀಡಿರುವ 623 ಪುಟಗಳ ಸುದೀರ್ಘ ಆದೇಶದಲ್ಲಿ ರಾಜಧರ್ಮ ಎಂದರೆ ಏನು ಎನ್ನುವುದನ್ನು ವಿವರಿಸಿದ್ದಾರೆ. ಕಾನೂನು ಧರ್ಮವಾಗಿಯೂ, ಧರ್ಮವನ್ನು ರಾಜನನ್ನಾಗಿಯೂ ಸಮಾಜ ಸ್ವೀಕರಿಸುತ್ತದೆ. ಒಬ್ಬ ರಾಜನಾದವನು ಅಶಕ್ತರನ್ನು ಬಲಾಢ್ಯರಿಂದ ರಕ್ಷಿಸಬೇಕು ಎಂಬ ಉಪನಿಷತ್ತಿನ(Upanishad) ಸಾರವನ್ನು ಅವರು ಉಲ್ಲೇಖಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರ ರಾಜಧರ್ಮ(Rajadharma) ಪುಸ್ತಕದ ಸಾಲುಗಳನ್ನು ಉಲ್ಲೇಖಿಸಿ, “ಧರ್ಮವನ್ನು ರಕ್ಷಿಸುವವರನ್ನು ಧರ್ಮ ರಕ್ಷಿಸುತ್ತದೆ, ನಾಶ ಮಾಡುವವರನ್ನು ಧರ್ಮವೇ ನಾಶ ಮಾಡುತ್ತದೆ”. ಶಾಸಕನೊಬ್ಬ ಅಧಿಕಾರದಲ್ಲಿದ್ದಾಗ ಕೊಲೆ ಮಾಡಿರುವುದು ಅತ್ಯಂತ ಗಂಭೀರ ಅಪರಾಧ. ಸಮಾಜ ತನ್ನ ಪ್ರತಿನಿಧಿಯಿಂದ ಸುಧಾರಣೆಯಾಬೇಕು ಎಂದು ಬಯಸುತ್ತದೆ. ಜನರ ಕಲ್ಯಾಣ ಮತ್ತು ಕಾನೂನು ರೂಪಿಸುವ ಪರಮಾಧಿಕಾರ ಶಾಸಕಾಂಗಕ್ಕೆ ಇದೆ. ಶಾಸಕಾಂಗದ ಭಾಗವಾಗಿರುವ ಶಾಸಕರ ಮೇಲೆ ದೊಡ್ಡ ಜವಾಬ್ದಾರಿ ಇರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಸಕರ ಜವಾಬ್ದಾರಿ ಮತ್ತು ಕ್ರೂರ ಕೃತ್ಯದ ಬಗ್ಗೆ ತಮ್ಮ ತೀರ್ಪಿನಲ್ಲಿ, ಶಾಸಕನೊಬ್ಬ ಅಧಿಕಾರದಲ್ಲಿದ್ದಾಗ ಕೊಲೆ ಪಿತೂರಿಯಲ್ಲಿ ಭಾಗಿಯಾಗಿರುವುದು ಅತ್ಯಂತ ಗಂಭೀರ ವಿಚಾರ. ಇದು ಆಕಸ್ಮಿಕ ಘಟನೆಯಲ್ಲ, ಬದಲಿಗೆ ಕಾನೂನು ಜಾರಿ ಸಂಸ್ಥೆಗಳ ಬೆಂಬಲದೊಂದಿಗೆ ನಡೆಸಲಾದ ಕ್ರೂರ ಕೃತ್ಯ. ವಿನಯ್ ಕುಲಕರ್ಣಿ ಅವರು ತಮ್ಮ ರಾಜಕೀಯ ಎದುರಾಳಿಯನ್ನು ಮಟ್ಟಹಾಕಲು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Vinay Kulkarni 1 1

ಅಂದಿನ ತನಿಖಾಧಿಕಾರಿ ಚನ್ನಕೇಶವ ಟಿಂಗರಿಕರ್ ಅವರು ಆರೋಪಿಗಳೊಂದಿಗೆ ಕೈಜೋಡಿಸಿ ತನಿಖೆಯ ದಿಕ್ಕು ತಪ್ಪಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿಯೂ ಪೊಲೀಸರು ನ್ಯಾಯಾಲಯದ ಮುಂದೆ ಬಹಿರಂಗವಾಗಿ ಸುಳ್ಳು ಹೇಳಿದ್ದಾರೆ. ಅಧಿಕಾರಿಗಳಾದ ಶಿವಾನಂದ ಚಲವಾದಿ, ಬಾಬು ಕಟಗಿ ಮತ್ತು ಶಂಕರಗೌಡ ಪಾಟೀಲ್ ವಿರುದ್ಧ ಸುಳ್ಳು ಸಾಕ್ಷ್ಯ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲು ಸೂಚಿಸಿದ ನ್ಯಾಯಾಧೀಶರು ರಾಜ್ಯದ ಪೊಲೀಸರೇ ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವುದು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಕೊಲೆಯ ಹಿಂದೆ ನಡೆದ ವ್ಯವಸ್ಥಿತ ಹಣದ ವಹಿವಾಟು ಮತ್ತು ಸಭೆಗಳ ವಿವರಗಳನ್ನು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಯೋಗೀಶ್ ಗೌಡರ ಕೊಲೆಗಾಗಿ ‘ಬೆಂಗಳೂರು ಬಾಯ್ಸ್’ ಎಂಬ ತಂಡಕ್ಕೆ 20 ಲಕ್ಷ ರೂಪಾಯಿ ನೀಡಲಾಗಿತ್ತು.ಕೊಲೆಗೂ ಮುನ್ನ ವಿನಯ್ ಕುಲಕರ್ಣಿ ಅವರ ಡೇರಿ ಫಾರ್ಮ್‌ನಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲಿ ಅಂದಿನ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ವಿವರಿಸಿದ್ದಾರೆ. ದಿಕ್ಕು ತಪ್ಪಿಸುವ ತಂತ್ರ: ಕೊಲೆ ಆರೋಪಿಗಳೆಂದು ಬಿಂಬಿಸಲು ಮತ್ತೊಂದು ಗುಂಪಿಗೆ 6 ಲಕ್ಷ ರೂಪಾಯಿ ನೀಡಲಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ಇಂತಹ ಕೃತ್ಯಗಳು ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರಿಟ್ಟಿರುವ ನಂಬಿಕೆಯನ್ನು ಕುಗ್ಗಿಸುತ್ತವೆ. ಧರ್ಮ ರಕ್ಷಕನೇ ಧರ್ಮ ಧ್ವಂಸಕನಾಗಬಾರದು. ಸಮಾಜ ತನ್ನ ಪ್ರತಿನಿಧಿಯಿಂದ ಸುಧಾರಣೆಯನ್ನು ಬಯಸುತ್ತದೆಯೇ ಹೊರತು ಇಂತಹ ಅಧರ್ಮವನ್ನಲ್ಲ ಎಂದು ನ್ಯಾಯಾಲಯ ಕಟುವಾಗಿ ನುಡಿದಿದೆ.

ಈ ಆದೇಶವು ಕೇವಲ ಒಂದು ಕೊಲೆ ಪ್ರಕರಣದ ತೀರ್ಪಲ್ಲ, ಬದಲಿಗೆ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಜನಪ್ರತಿನಿಧಿಗಳು ಮತ್ತು ಭ್ರಷ್ಟ ಅಧಿಕಾರಿಗಳಿಗೆ ನೀಡಿದ ಬಿಸಿ ಮುಟ್ಟಿಸುವಂತಹ ಎಚ್ಚರಿಕೆ ಎಂದೇ ವಿಶ್ಲೇಷಿಸಲಾಗುತ್ತದೆ.

ರಾಜಕೀಯ ಎದುರಾಳಿ ವಿರುದ್ಧ ದ್ವೇಷ ಸಾಧಿಸುವ ಭಯಾನಕ ಕೃತ್ಯ ಎಸಗಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಕೃತ್ಯವಲ್ಲ. ಬದಲಿಗೆ ಕಾನೂನು ಜಾರಿ ಸಂಸ್ಥೆಯ ಬೆಂಬಲದಿಂದ ಮಾಡಿರುವ ಕ್ರೂರ ಕೃತ್ಯವಾಗಿದೆ ಎಂದು ತೀರ್ಪಿನಲ್ಲಿ ವಿವರಿಸಿದ್ದಾರೆ.

TAGGED:RajadharmaSantosh Gajanan BhatUpanishadVinay Kulkarniಉಪನಿಷತ್ವಿನಯ್ ಕುಲಕರ್ಣಿಸಂತೋಷ್‌ ಗಜಾನನ ಭಟ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
17 minutes ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
46 minutes ago
SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
2 hours ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
2 hours ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
2 hours ago
Lok Sabha Election 2024 Rs. 4650 crores seized even before polling begins Higher than total seizures in 2019 polls rs 500
Latest

ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?