– ಸ್ವಾಭಿಮಾನಿ ಸಮಾವೇಶದಲ್ಲಿ ಹಂಚಿಕೆ
ಮಂಡ್ಯ: ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಅಂಬರೀಶ್ ಕೊನೆಗೂ ಜಯಭೇರಿ ಬಾರಿಸಿದ್ದಾರೆ. ಇದೇ ಕಾರಣಕ್ಕೆ ಇಂದು ಮಂಡ್ಯದಲ್ಲಿ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ ಸ್ವಾಭಿಮಾನ ಸಮಾವೇಶ ಹಾಗೂ ಅಂಬರೀಶ್ ಜನ್ಮದಿನದ ಅಂಗವಾಗಿ ಐದು ಕ್ವಿಂಟಾಲ್ ಧಾರವಾಡ ಪೇಡಾವನ್ನು ಉದ್ಯಮಿ ನಾರಾಯಣ ಕಲಾಲ್ ರವಾನಿಸಿದ್ದಾರೆ.
Advertisement
Advertisement
ಬಾಬುಸಿಂಗ್ ಠಾಕೂರ್ ಪೇಡಾ ಫ್ಯಾಕ್ಟರಿಯಲ್ಲಿ ತಯಾರಾಗಿರುವ ಪೇಡಾವನ್ನು ವಿಶೇಷ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿದ್ದು, ಈಗಾಗಲೇ ಮಂಡ್ಯ ತಲುಪಿವೆ. ನಾರಾಯಣ ಕಲಾಲ್ ಅಂಬರೀಶ್ ಜೊತೆ ಅತ್ಯಂತ ಸಮೀಪದ ಗೆಳತನವಿರುವ ಕಾರಣ ಅಂಬಿ ಮೇಲಿನ ಪ್ರೀತಿಗಾಗಿ ಈ ಪೇಡಾ ಮಾಡಿಸಿದ್ದು ವಿಶೇಷವಾಗಿದೆ.
Advertisement
ಮಧ್ಯಾಹ್ನ ಸಮಾವೇಶದಲ್ಲಿ ಪೇಡಾವನ್ನು ಜನತೆಗೆ ಹಂಚಿಕೆ ಮಾಡಲಾಗುತ್ತದೆ. ಇತ್ತ ಮಂಡ್ಯದ ಹನಕೆರೆ ಶಶಿಕುಮಾರ್ ಎಂಬವರಿಂದ 20 ಸಾವಿರ ಲಡ್ಡು ತಯಾರಾಗಿದ್ದು, ಸಮಾವೇಶದಲ್ಲಿ ಭಾಗವಹಿಸುವವರಿಗೆ ಲಡ್ಡು ಹಾಗೂ ಪೇಡಾ ಹಂಚಲಾಗುತ್ತದೆ.
Advertisement
ಈ ಹಿಂದೆ ಅಂಬರೀಶ್ ಅವರು ಯಶ್, ರಾಧಿಕಾ ದಂಪತಿಯ ಮಗುವಿಗೆ ಕಲಘಟಗಿ ತೊಟ್ಟಿಲು ನೀಡುವ ಸಂಬಂಧ ನಾರಾಯಣ ಕಲಾಲ್ ಅವರಿಗೆ ಫೋನ್ ಮಾಡಿದ್ದರು. ತನ್ನ ಬೇಡಿಕೆಗೆ ಅನುಗುಣವಾಗಿ ತೊಟ್ಟಿಲು ತಯಾರಿಸಿ ಕೊಡುವಂತೆ ಅಂಬಿ ಕಲಾಲ್ ಅವರಲ್ಲಿ ಕೇಳಿಕೊಂಡಿದ್ದರು. ಬಳಿಕ ನಾರಾಯಣ್ ಕಲಾಲ್ ಅವರು ಕಲಘಟಗಿಯ ಮೂಲದ ಶ್ರೀಧರ್ ಸಾವುಕಾರ್ ಅವರಲ್ಲಿ ತೊಟ್ಟಿಲಿಗೆ ಆರ್ಡರ್ ಮಾಡಿದ್ದರು.