ಧಾರವಾಡ: ಅಂಡಮಾನ್ (Andaman), ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಧಾರವಾಡದ (Dharwad) ಕೆಸಿಡಿ ಕಾಲೇಜ್‌ನ ಅಸಿಸ್ಟೆಂಟ್ ಪ್ರೊಫೆಸರ್ (Assistant Professor) ಹೃದಯಾಘಾತದಿಂದ (Heart Attack ) ಸಾವನ್ನಪ್ಪಿದ್ದಾರೆ.
ಮೃತರನ್ನು ಎಸ್.ಅನ್ನಪೂರ್ಣ ಎಂದು ಗುರುತಿಸಲಾಗಿದೆ. ಅವರು ಅರ್ಥಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಕುಟುಂಬದ ಜೊತೆ ಅಂಡಮಾನ್ ನಿಕೋಬಾರ್‌ನ ಫೋರ್ಟ್‍ಬ್ಲೇರ್‌ಗೆ ಹೋಗಿದ್ದರು. ಕಳೆದ ರಾತ್ರಿ ಅನ್ನಪೂರ್ಣ ಅಸ್ವಸ್ಥರಾಗಿದ್ದರು. ಇದನ್ನೂ ಓದಿ: ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ
ಸ್ಥಳೀಯ ಆಸ್ಪತ್ರೆಗೆ ಅನ್ನಪೂರ್ಣರನ್ನು ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ. ಅವರ ಶವವನ್ನು ಧಾರವಾಡಕ್ಕೆ ತರಲು ಕುಟುಂಬಸ್ಥರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸೋಮವಾರ ಶವ ನಗರಕ್ಕೆ ತರುವ ಸಾಧ್ಯತೆ ಇದೆ.
ಕೆಸಿಡಿ ಕಾಲೇಜಿನ ಕಾವೇರಿ ಹಾಸ್ಟೆಲ್ ವಾರ್ಡನ್ ಕೂಡಾ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಗಂಡನ ಸೈಕೋ ವರ್ತನೆ ವಿರುದ್ಧ ದೂರು – ನಗ್ನ ಫೋಟೋ ತೆಗೆದು ಬ್ಲ್ಯಾಕ್‌ಮೇಲ್ ಅಂತ ಪತಿ ಪ್ರತಿದೂರು!

