ಧಾರವಾಡ: ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯ 14 ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
Advertisement
ಆಸ್ಪತ್ರೆ ಆವರಣವನ್ನು ಕಂಟೋನ್‌ಮೆಂಟ್ ವಲಯವನ್ನಾಗಿಸಲು ನಿರ್ಧರಿಸಲಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಧಾರವಾಡ ಎಸ್‍ಡಿಎಂ ಕಾಲೇಜಿನಲ್ಲಿ ಮತ್ತೆ ಕೊರೊನಾ ಸ್ಫೋಟ – 77 ಮಂದಿಗೆ ಸೋಂಕು
Advertisement
ಸಿಎಂ 7 ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಿದ್ದಾರೆ. ಈ ವೇಳೆ ಎಸ್‌ಡಿಎಂ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಈಗ 281 ಪಾಸಿಟಿವ್ ಪ್ರಕರಣಗಳು ಎಸ್‌ಡಿಎಂನದ್ದೇ ಆಗಿವೆ. 6 ಜನರಿಗೆ ಮಾತ್ರ ರೋಗ ಲಕ್ಷಣಗಳಿದ್ದು, ಉಳಿದವರಿಗೆ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 322 ಹೊಸ ಪ್ರಕರಣ 3 ಸಾವು – ಧಾರವಾಡದಲ್ಲಿ ಕೊರೊನಾ ಸ್ಫೋಟ
Advertisement
Advertisement
ಸದ್ಯ ಎಸ್‌ಡಿಎಂ ಒಪಿಡಿ ಅನ್ನು ಕೆಲ ದಿನಗಳವರೆಗೆ ಬಂದ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮಕೈಗೊಂಡಿದ್ದೇವೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ವಿಚಾರವನ್ನು ಇನ್ನೂ ಅನೇಕರು ಗಂಭೀರವಾಗಿ ಪರಿಗಣಿಸಿಲ್ಲ. ಸಭೆ-ಸಮಾರಂಭಗಳಿಗೆ ಹೋಗುವುದನ್ನು ಕಡಿಮೆ ಮಾಡಿ, ಜನಜಂಗುಳಿ ಇರುವ ಪ್ರದೇಶಗಳಲ್ಲಿ ಸೇರಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.