ಧಾರವಾಡ: ತಡಕೋಡ (Tadakod) ಗ್ರಾಮದಲ್ಲಿ ಉಂಟಾಗಿದ್ದ ಧ್ವಜ (Flag) ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರಿಗೆ (Hindu Activists) ಜಾಮೀನು (Bail) ಮಂಜೂರಾಗಿದ್ದು, ಎಲ್ಲ ಹಿಂದೂ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ತಡಕೋಡ ಗ್ರಾಮದ ಸದ್ದಾಂಹುಸೇನ್ ಎಂಬಾತ ಅಯೋಧ್ಯೆ ರಾಮಮಂದಿರದ ಫೋಟೋ ಮೇಲೆ ಹಸಿರು ಧ್ವಜ, ಓವೈಸಿ ಫೋಟೋ ಹಾಕಿ, ಇದು ಇಸ್ಲಾಮಿಕ್ ಪವರ್ ಎಂಬ ಸಂದೇಶ ಹಾಕಿ ಎಡಿಟ್ ಮಾಡಿದ್ದ ಫೋಟೋವನ್ನು ವಾಟ್ಸಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದ. ಇದನ್ನೂ ಓದಿ: ರಾಯಚೂರಿನ ಕೃಷ್ಣಾ ನದಿಯಲ್ಲಿ ಶಿವಲಿಂಗ, ವೆಂಕಟೇಶ್ವರ ಮೂರ್ತಿಗಳು ಪತ್ತೆ
Advertisement
Advertisement
ಇದರಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ತಡಕೋಡ ಗ್ರಾಮದ ಈದ್ಗಾ ಕಟ್ಟಡದ ಗುಂಬಜ್ ಮತ್ತು ಸದ್ದಾಂ ಮನೆ ಮೇಲೆ ದಾಳಿ ಮಾಡಿ ಮನೆಯಲಿದ್ದ ವಸ್ತುಗಳನ್ನು ಒಡೆದು ಆಕ್ರೋಶ ಹೊರಹಾಕಿದ್ದರು. ಆಗ ಗರಗ ಠಾಣೆ ಪೊಲೀಸರು ಕೆಲ ಹಿಂದೂ ಕಾರ್ಯಕರ್ತರನ್ನ ಬಂಧಿಸಿ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದರು. ಈಗ ಎಲ್ಲ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದ್ದು, ಮಾಜಿ ಶಾಸಕ ಅಮೃತ್ ದೇಸಾಯಿ (Amrut Ayyappa Desai) ಅವರು ಸ್ವತಃ ಕೇಂದ್ರ ಕಾರಾಗೃಹಕ್ಕೆ ತೆರಳಿ ಜೈಲಿನಿಂದ ಬಿಡುಗಯಾದ ಹಿಂದೂ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು – 6 ಮಂದಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ
Advertisement
Advertisement