ಧಾರವಾಡ: ಜಿಲ್ಲಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‍ಗೌಡ ಕೊಲೆ ಪ್ರಕರಣದ ಸುಪಾರಿ ತೆಗೆದುಕೊಂಡಿದ್ದಾರೆ ಎನ್ನಲಾದ ಆರೋಪಿಗಳನ್ನು ನ್ಯಾಯಾಲಯ 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.
ಭಾನುವಾರ ಸಿಬಿಐ ಅಧಿಕಾರಿಗಳು ಬೆಂಗಳೂರಿನಿಂದ ಈ ಸುಪಾರಿ ಕಿಲ್ಲರ್ಸ್‍ಗಳನ್ನು ಧಾರವಾಡಕ್ಕೆ ಕರೆ ತಂದು, ನ್ಯಾಯಾಧೀಶರ ಬಳಿ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇವತ್ತು ಸಿಬಿಐ ಅಧಿಕಾರಿಗಳು ಮತ್ತೇ ಧಾರವಾಡ ಪ್ರಧಾನ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರ ಎದುರು 6 ಆರೋಪಿಗಳನ್ನ ಹಾಜರು ಪಡಿಸಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.
Advertisement
Advertisement
ಈ ಹಿನ್ನೆಲೆ ನ್ಯಾಯಾಲಯ 6 ಆರೋಪಿಗಳನ್ನು ಮಾರ್ಚ್ 7ರ ವರೆಗೆ 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ. ಸದ್ಯ ದಿನೇಶ್, ಸುನೀಲ್ ಕುಮಾರ್, ನೂತನ್, ಅಶ್ವತ್, ಶಾನವಾಜ್, ನಜೀರ ಅಹ್ಮದನನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗೆ ಅವಕಾಶ ಸಿಕ್ಕಿದೆ.
Advertisement
Advertisement
2016ರ ಜೂನ್ 15ರಂದು ನಡೆದಿದ್ದ ಯೋಗೇಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು 6 ಆರೋಪಿಗಳನ್ನು ಬಂಧಿಸಲಾಗಿತ್ತು. ಯೋಗೇಶ್‍ಗೌಡ ಸಹೋದರ ಕೂಡಾ ಈ ಪ್ರಕರಣದಲ್ಲಿ ಕಾಣದ ಕೈಗಳಿದ್ದು, ಅವರನ್ನು ಹಿಡಿದು ಸಿಬಿಐ ಅಧಿಕಾರಿಗಳು ನಮಗೆ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.