Connect with us

Dharwad

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದವ ಅರೆಸ್ಟ್

Published

on

ಧಾರವಾಡ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು 27 ವರ್ಷದ ಮುತ್ತಪ್ಪ ವಾಯಗಲ್ ಎಂದು ಗುರುತಿಸಲಾಗಿದೆ. ಈತ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದನು. ಈ ಸಂಬಂಧ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

7 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ, ಬಾಲಕಿಯ ತಂದೆಯ ಪರಿಚಯವಿದ್ದ ಮುತ್ತಪ್ಪ ವಾಯಗಲ್, ಅದೇ ನೆಪದಲ್ಲಿ ಮನೆಗೆ ಬಂದು ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಅತ್ಯಾಚಾರಿಯನ್ನು ಜೈಲಿಗಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *