ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿದ್ದ ಸಿಬಿಐ ಪ್ರಮುಖ ಆರೋಪಿಗಳಾದ ಬಸವರಾಜ ಶಿವಪ್ಪ ಮುತ್ತಗಿ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು.
Advertisement
Advertisement
ರಾಜ್ಯ ಸರ್ಕಾರದ ಆದೇಶ ರದ್ದು ಮಾಡುವಂತೆ ಕೋರಿ ಪ್ರಕರಣದ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿ ಹೈಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
Advertisement
2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.
Advertisement
ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.
https://www.youtube.com/watch?v=vpNnQPrC3pg