ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನಿಂದ ತೆರವುಗೊಂಡಿದ್ದ ರಾಧಾಕೃಷ್ಣ ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಎಐಎಡಿಎಂಕೆ ಬಂಡಾಯ ಎದ್ದು ಸ್ಪರ್ಧಿಸಿದ್ದ ಶಶಿಕಲಾ ಆಪ್ತ ಪಕ್ಷೇತರ ಅಭ್ಯರ್ಥಿ ಟಿಟಿವಿ ದಿನಕರನ್ 40,707 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
Advertisement
ಭಾನುವಾರ ಬೆಳಗ್ಗೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಆರಂಭದಿಂದಲೂ ಭಾರಿ ಮುನ್ನಡೆ ಕಾಯ್ದುಕೊಂಡಿದ್ದ ದಿನಕರನ್ ಮತ ಏಣಿಕೆ ಮುಕ್ತಾಯದ ವೇಳೆಗೆ 89,013 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಪಡೆದಿದ್ದಾರೆ.
Advertisement
ದಿನಕರನ್ ಗೆಲುವುನಿಂದ ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಮುಖಭಂಗವಾಗಿದ್ದು ಎಐಎಡಿಎಂಕೆಯಿಂದ ಸ್ಪರ್ಧೆ ಮಾಡಿದ್ದ ಮಧುಸೂದನ್ ಅವರಿಗೆ ಸೋಲಾಗಿದೆ.
Advertisement
Advertisement
ಚುನಾವಣೆ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಟಿವಿ ದಿನಕರನ್, ದಿವಂಗತ ನಾಯಕಿ ಜಯಲಲಿತಾ ಅವರ ನಿಜವಾದ ರಾಜಕೀಯ ಅನುಯಾಯಿ ತಾನೇ ಎಂದು ಹೇಳಿದ್ದಾರೆ. ಅಲ್ಲದೇ ಇನ್ನು ಮೂರು ತಿಂಗಳುಗಳಲ್ಲಿ ತಮಿಳುನಾಡಿನ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಚುನಾವಣೆಯಲ್ಲಿ ತಮಗೆ ಮತ ನೀಡಿ ಆಯ್ಕೆ ಮಾಡಿರುವ ಜನತೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
ದಿನಕರನ್ ವಿರುದ್ಧ ಸ್ಪರ್ಧಿಸಿದ್ದ ಎಐಎಡಿಎಂಕೆ ಯ ನಾಯಕ ಮಧುಸೂಧನ್ 48,306 ಮತಗಳು ಹಾಗೂ ಡಿಎಂಕೆ ನಾಯಕ ಮರುಥು ಗಣೇಶ್ 24,651 ಮತಗಳನ್ನು ಗಳಿಸಿದ್ದಾರೆ. ಇನ್ನು ವಿಶೇಷವಾಗಿ ಚುನಾವಣೆಯಲ್ಲಿ 2,373 ನೋಟಾ ಮತಗಳು ಚಲಾವಣೆಯಾಗಿದ್ದು, ನಂತರ ಸ್ಥಾನದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಕರು ನಾಗರಾಜನ್ ಕೇವಲ 1,417 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ತಮಿಳುನಾಡು ಚುನಾವಣೆಯ ದಿಕ್ಕನ್ನೆ ಬದಲಾಯಿಸುವ ಶಕ್ತಿ ಫೋಟೋ, ವಿಡಿಯೋಗಳಿಗಿದೆ!
ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರಕ್ಕೆ ಈ ವರ್ಷದ 12 ರಂದು ಉಪಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಯಲ್ಲಿ ದಿನಕರನ್ ಮತದಾರರಿಗೆ ಹಣ ಹಂಚಲು ಪಕ್ಷದ ನಾಯಕರು ತಮ್ಮ ಖಾತೆಗಳಿಂದ 89 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಭಾರೀ ಪ್ರಮಾಣದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಉಪಚುನಾವಣೆಯನ್ನು ರದ್ದುಗೊಳಿಸಿತ್ತು.