ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡಕ್ಕೆ ರೀ ಎಂಟ್ರಿ ನೀಡುವ ವಿಚಾರವಾಗಿ ಬಿಸಿಸಿಐ ಆಯ್ಕೆ ಸಮಿತಿ ಕ್ಲಾರಿಟಿ ನೀಡಿದೆ. ಕಳೆದ ವರ್ಷದ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಟೀ ಇಂಡಿಯಾದಿಂದ ದೂರವೇ ಉಳಿದಿರುವ ಧೋನಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ರೇಸ್‍ನಲ್ಲಿ ನಿಲ್ಲಬೇಕಾದರೆ ಐಪಿಎಲ್ 2020ರ ಸೀಸನ್‍ನಲ್ಲಿ ತಮ್ಮ ಫಾರ್ಮ್ ನಿರೂಪಿಸಬೇಕು ಎಂದು ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ.
#TeamIndia for 3-match ODI series against SA – Shikhar Dhawan, Prithvi Shaw, Virat Kohli (C), KL Rahul, Manish Pandey, Shreyas Iyer, Rishabh Pant, Hardik Pandya, Ravindra Jadeja, Bhuvneshwar Kumar, Yuzvendra Chahal, Jasprit Bumrah, Navdeep Saini, Kuldeep Yadav, Shubman Gill. pic.twitter.com/HD53LRAhoh
— BCCI (@BCCI) March 8, 2020
Advertisement
ಮಾರ್ಚ್ 29 ರಿಂದ ಐಪಿಎಲ್ 2020ರ ಟೂರ್ನಿ ಆರಂಭವಾಗಲಿದ್ದು, ಈಗಾಗಲೇ ಧೋನಿ ಸಿಎಸ್‍ಕೆ ತಂಡದ ತರಬೇತಿ ಶಿಬಿರಕ್ಕೆ ಹಾಜರಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ಅವರ ಅಧಿಕಾರದ ಅವಧಿ ಈಗಾಗಲೇ ಮುಕ್ತಾಯವಾಗಿದ್ದು, ಕನ್ನಡಿಗ ಸುನಿಲ್ ಜೋಶಿ ಕಳೆದ ವಾರವೇ ಆಯ್ಕೆ ಸಮಿತಿಗೆ ಆಯ್ಕೆಯಾಗಿದ್ದಾರೆ.
Advertisement
ದಕ್ಷಿಣ ಆಫ್ರಿಕಾ ವಿರುದ್ಧದ ಮಾರ್ಚ್ 12ರಿಂದ ಆರಂಭವಾಗುವ ಏಕದಿನ ಕ್ರಿಕೆಟ್ ಟೂರ್ನಿಗೆ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದ್ದು, ಆ ವೇಳೆ ಧೋನಿ ಅವರ ಹೆಸರನ್ನು ಪ್ರಸ್ತಾಪ ಮಾಡಿರಲಿಲ್ಲ. ಆದರೆ ಸದ್ಯ ಆಯ್ಕೆ ಸಮಿತಿ ನಡುವೆ ಧೋನಿ ಅವರ ಕ್ರಿಕೆಟ್ ಭವಿಷ್ಯ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
Advertisement
The Dressing Room, the Team Bus and the Team Hotel were all #yellove‘d up and here’s a super duper glimpse! #WhistlePodu ???????? pic.twitter.com/4SbarH2cDJ
— Chennai Super Kings (@ChennaiIPL) March 8, 2020
Advertisement
ಈ ಕುರಿತು ಸ್ಪಷ್ಟನೆ ನೀಡಿರುವ ಆಯ್ಕೆ ಸಮಿತಿ, ದಕ್ಷಿಣ ಆಫ್ರಿಕಾ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಧೋನಿ ಹೆಸರು ಪ್ರಸ್ತಾಪವಾಗಿಲ್ಲ. ಅವರ ಕ್ರಿಕೆಟ್ ಭವಿಷ್ಯದ ಕುರಿತು ಸಭೆಯಲ್ಲಿ ಯಾವುದೇ ಚರ್ಚೆ ನಡೆಸಿಲ್ಲ. ಆದರೆ ಐಪಿಎಲ್ ಟೂರ್ನಿಯಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡಿದರೆ ಅವರು ಮತ್ತೆ ತಂಡಕ್ಕೆ ಕಮ್‍ಬ್ಯಾಕ್ ಮಾಡಬಹುದು. ಏಕೆಂದರೆ ಧೋನಿ ಅವರೊಂದಿಗೆ ಹಲವರು ತಂಡದಲ್ಲಿ ಸ್ಥಾನ ಪಡೆಯಲು ನೋಡುತ್ತಿದ್ದಾರೆ. ಒಂದೊಮ್ಮೆ ಧೋನಿ ಅವರಿಗಿಂತ ಬೇರೆ ಆಟಗಾರರು ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡದರೆ ಅಚ್ಚರಿ ಆಯ್ಕೆಗಳನ್ನು ಮಾಡುತ್ತೇವೆ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೂತನವಾಗಿ ಆಯ್ಕೆ ಸಮಿತಿಯ ಜವಾಬ್ದಾರಿ ವಹಿಸಿಕೊಂಡಿರುವ ಸುನಿಲ್ ಜೋಶಿ ಹಾಗೂ ಆಯ್ಕೆ ಸಮಿತಿಯ ಸದಸ್ಯರಿಗೆ ಧೋನಿ ಕ್ರಿಕೆಟ್ ಭವಿಷ್ಯ ಬಹುದೊಡ್ಡ ಸವಾಲಾಗಿತ್ತು. ಇತ್ತ ಇದಕ್ಕೂ ಮುನ್ನವೇ ಪ್ರತಿಕ್ರಿಯೆ ನೀಡಿದ್ದ ಎಂಎಸ್‍ಕೆ ಪ್ರಸಾದ್, ಆಯ್ಕೆ ಸಮಿತಿ ಟೀಂ ಇಂಡಿಯಾ ವಿಚಾರದಲ್ಲಿ ಧೋನಿ ಅವರಿಗಿಂತಲೂ ಮುಂದಿನ ಆಯ್ಕೆಗಳ ಬಗ್ಗೆ ಹೆಚ್ಚು ಗಮನ ನೀಡುವುದಾಗಿ ತಿಳಿಸಿದ್ದರು.
The Dressing Room, the Team Bus and the Team Hotel were all #yellove‘d up and here’s a super duper glimpse! #WhistlePodu ???????? pic.twitter.com/4SbarH2cDJ
— Chennai Super Kings (@ChennaiIPL) March 8, 2020
ಉಳಿದಂತೆ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಸ್ಟ್ರೇಲಿಯಾದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿ ತಂಡದ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇತ್ತ ಧೋನಿ ಅವರ ಸ್ಥಾನದಲ್ಲಿ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದ ರಿಷಬ್ ಪಂತ್ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಕೆಎಲ್ ರಾಹುಲ್ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಧೋನಿ ಅವರಿಗೆ ಕಮ್‍ಬ್ಯಾಕ್ ಮಾಡುವ ಅವಕಾಶ ಸಿಗುವ ಸಾಧ್ಯತೆ ಇದೆ.