ಮುಂಬೈ: ಸೆಮಿಫೈನಲ್‍ನಲ್ಲಿ ಸೋತು ಭಾರತ ವಿಶ್ವಕಪ್‍ನಿಂದ ಹೊರಬಿದ್ದಿದೆ. ಈ ಸಮಯದಲ್ಲೇ ಮಾಜಿ ನಾಯಕ ಎಂ.ಎಸ್ ಧೋನಿ ಅವರ ನಿವೃತ್ತಿ ಮಾತುಗಳು ಕೇಳಿ ಬರುತ್ತಿವೆ. ಈ ಸಮಯದಲ್ಲಿ ಬಾಲಿವುಡ್‍ನ ಕೋಗಿಲೆ ಎಂದೇ ಕರೆಸಿಕೊಳ್ಳುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಧೋನಿ ಮುಂದೆ ದೇಶದ ಪರ ಅಡಬೇಕು ಎಂದು ಹೇಳಿದ್ದಾರೆ.
ಮಳೆಯಿಂದ ಮುಂದೂಡಿದ್ದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯ ಬುಧವಾರ ನಡೆದಿದ್ದು, ಈ ಪಂದ್ಯದಲ್ಲಿ ಭಾರತ 18 ರನ್ ಅಂತರದಿಂದ ಸೋತಿದೆ. ಆದರೆ ಪಂದ್ಯವನ್ನು ಅಂತಿಮ ಘಟ್ಟಕ್ಕೆ ತಂದ ಧೋನಿ ಭಾರತವನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದಾರೆ. ಅದ್ದರಿಂದ ಧೋನಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಬೇಕು ಎಂಬ ಮಾತುಗಳು ಕೇಳಿ ಬರುತ್ತೀವೆ.
Advertisement
Namaskar M S Dhoni ji.Aaj kal main sun rahi hun ke Aap retire hona chahte hain.Kripaya aap aisa mat sochiye.Desh ko aap ke khel ki zaroorat hai aur ye meri bhi request hai ki Retirement ka vichar bhi aap mann mein mat laayiye.@msdhoni
— Lata Mangeshkar (@mangeshkarlata) July 11, 2019
Advertisement
ಈ ವಿಚಾರದಲ್ಲಿ ಧೋನಿಗೆ ಬೆಂಬಲ ನೀಡಿರುವ ಲತಾ ಮಂಗೇಶ್ಕರ್ ಅವರು, “ನಮಸ್ಕಾರ ಎಂ.ಎಸ್ ಧೋನಿ ಜಿ ನೀವು ನಿವೃತ್ತಿ ಹೊಂದಲು ಬಯಸುತ್ತೀರಿ ಎಂದು ನಾನು ಕೇಳಿದ್ದೇನೆ. ದಯವಿಟ್ಟು ಆ ರೀತಿ ಯೋಚಿಸಬೇಡಿ. ದೇಶಕ್ಕೆ ನಿಮ್ಮ ಆಟದ ಅಗತ್ಯವಿದೆ. ನೀವು ನಿವೃತ್ತಿಯ ಬಗ್ಗೆ ಯೋಚಿಸಬಾರದು ಎಂಬುದು ನನ್ನ ವೈಯಕ್ತಿಕ ಮನವಿ” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
Advertisement
Advertisement
ಬುಧವಾರ ನಡೆದ ಪಂದ್ಯದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಧೋನಿ ಅವರ ನಿವೃತ್ತಿಯ ಬಗ್ಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಕೇಳಿದಾಗ, ಇಲ್ಲ ಧೋನಿ ನಿವೃತ್ತಿಯ ಬಗ್ಗೆ ನಮ್ಮ ಬಳಿ ಏನೂ ಹೇಳಿಲ್ಲ ಎಂದು ಹೇಳಿದ್ದರು. 2019ರ ವಿಶ್ವಕಪ್ ನಂತರ ಧೋನಿ ನಿವೃತ್ತಿ ಹೊಂದುತ್ತಾರೆ ಎಂಬ ಗಾಳಿಮಾತಿದೆ. ಆದರೆ ಧೋನಿ ಈ ವಿಚಾರದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ.
ಸೆಮಿಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಟವಾಡಿ ಎಂ. ಎಸ್ ಧೋನಿ ಅವರು ತಂಡವನ್ನು ಗೆಲುವಿನ ದಡದತ್ತ ತಂದಿದ್ದರು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಈ ಸಂದರ್ಭದಲ್ಲಿ ಭಾರತಕ್ಕೆ 117 ಎಸೆತಗಳಲ್ಲಿ 148 ರನ್ ಗಳಿಸುವ ಅಗತ್ಯವಿತ್ತು. ಆದರೆ ಧೋನಿ ಮತ್ತು ಜಡೇಜಾ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು.
Hasta la vista, Dhoni ???? #CWC19 pic.twitter.com/TWxbKULjCQ
— ICC (@ICC) July 10, 2019
ಶತಕದ ಜೊತೆಯಾಟವಾಡಿದ ಈ ಜೋಡಿ 122 ಎಸೆತಗಳಲ್ಲಿ 116 ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್‍ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸೆಯಾಗಿದ್ದ ಧೋನಿ 50 ರನ್ (72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ಅಡುತ್ತಿದ್ದ ಧೋನಿ 48ನೇ ಓವರ್‍ನ 3 ನೇ ಎಸೆತದಲ್ಲಿ ಮಾರ್ಟಿನ್ ಗುಪ್ಟಿಲ್ ಅವರು ಹೊಡೆದ ಥ್ರೋಗೆ ರನೌಟ್ ಆದರು.