ಲೂಸಿಯಾ ಪವನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಧೂಮಂ’ (Dhoomam) ಸಿನಿಮಾ ಇದೇ ಜೂನ್ 23 ರಂದು ದೇಶದಾದ್ಯಂತ ಬಿಡುಗಡೆ (Release) ಆಗುತ್ತಿದೆ. ಸಿನಿಮಾ ರಿಲೀಸ್ ಗೆ ಸಂಬಂಧಿಸಿದಂತೆ ಹಲವಾರು ಗೊಂದಲಗಳು ಇದ್ದವು. ಆ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ ಹೊಂಬಾಳೆ ಫಿಲ್ಮ್ಸ್ (Hombale Films). ಇದು ಮಲಯಾಳಂ ಸಿನಿಮಾವಾಗಿದ್ದರಿಂದ ಕೇವಲ ಮಲಯಾಳಂನಲ್ಲಿ ಮಾತ್ರ ಬಿಡುಗಡೆ ಆಗತ್ತಾ? ಅಥವಾ ಕನ್ನಡದಲ್ಲೂ ಡಬ್ ಆಗಿ ರಿಲೀಸ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಯನ್ನು ಹಲವರು ಮಾಡಿದ್ದರು.
Advertisement
ಸಿನಿಮಾ ರಿಲೀಸ್ ಗೆ ಸಂಬಂಧಿಸಿದಂತೆ ಹೊಂಬಾಳೆ ಫಿಲ್ಮ್ಸ್ ಪ್ರತಿಕ್ರಿಯೆ ನೀಡಿದ್ದು ಜೂನ್ 23 ರಂದು ಏಕಕಾಲದಲ್ಲೇ ಕನ್ನಡ ಮತ್ತು ಮಲಯಾಳಂ ಎರಡೂ ಭಾಷೆಯಲ್ಲೂ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಸ್ಪಷ್ಟ ಪಡಿಸಿದೆ. ಇತ್ತೀಚೆಗಷ್ಟೇ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನೂ ಓದಿ:ಮನುಷ್ಯರಂತೆ ವರ್ತಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ- ‘ಪುಷ್ಪ’ ನಟಿ ಅನಸೂಯಾ
Advertisement
Advertisement
ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ (Pawan Kumar) ನಿರ್ದೇಶನ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ (Aparna), ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಸುರೇಶ್ ಅವರ ಸಂಕಲನ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
Advertisement
ಸಮಯದ ವಿರುದ್ಧದ ಓಟದಲ್ಲಿ ಸಿಕ್ಕಿರುವ ಅವಿ (ಫಹಾದ್ ಫಾಸಿಲ್) (Fahadh Faasil) ಮತ್ತು ದಿಯಾ (ಅಪರ್ಣ) ಸುತ್ತ ಈ ಚಿತ್ರ ಸುತ್ತುತ್ತದೆ. ಸುತ್ತ ಅಪಾಯ ಮತ್ತು ಮನಸ್ಸೊಳಗಿನ ಭಯವನ್ನು ಮೆಟ್ಟಿ ನಿಲ್ಲುವುದಕ್ಕೆ ಅವರಿಬ್ಬರೂ ಏನೆಲ್ಲಾ ತ್ಯಾಗಗಳನ್ನು ಮಾಡುತ್ತಾರೆ ಎಂಬುದೇ ಈ ಚಿತ್ರದ ಕಥೆ. ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಪವನ್ ಅವರೇ ರಚಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪವನ್ ಕುಮಾರ್, ‘ಕಳೆದ ಒಂದು ದಶಕದಿಂದ ಈ ಚಿತ್ರವನ್ನು ಮಾಡಬೇಕು ಎಂಬ ಪ್ರಯತ್ನದಲ್ಲಿದ್ದೆ ಹಾಗೂ ಒಂದು ಅದ್ಭುತ ಚಿತ್ರ ಮಾಡುವ ನಿಟ್ಟಿನಲ್ಲಿ ಚಿತ್ರಕಥೆಯನ್ನು ಹಲವು ಬಾರಿ ತಿದ್ದಿದ್ದೆ. ಒಂದು ದಶಕದ ನನ್ನ ಕನಸನ್ನು ಇದೀಗ ಹೊಂಬಾಳೆ ಪ್ರೊಡಕ್ಷನ್ಸ್ ಸಂಸ್ಥೆಯು ನನಸು ಮಾಡಿದೆ. ಒಂದು ವಿಭಿನ್ನವಾದ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಕೈ ಜೋಡಿಸಿದೆ. ಹಲವು ಪ್ರತಿಭಾವಂತರ ತಂಡವನ್ನು ನೀಡಿ ಒಂದೊಳ್ಳೆಯ ಚಿತ್ರ ನೀಡುವುದಕ್ಕೆ ಸಂಪೂರ್ಣ ಸಹಕಾರ ನೀಡಿದೆ. ಈ ಚಿತ್ರ ಮತ್ತು ಕಥೆಯನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲ ನನಗಿದೆ’ ಎನ್ನುತ್ತಾರೆ.