`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

By
1 Min Read

ಸ್ಯಾಂಡಲ್‌ವುಡ್‌ನ `ಪೊಗರು’ ಹೀರೋ ಧ್ರುವಾ ಸರ್ಜಾ ಸದ್ಯ `ಮಾರ್ಟಿನ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಎ.ಪಿ ಅರ್ಜುನ್ ಜತೆ ಆ್ಯಕ್ಷನ್ ಸಿಕ್ವೇನ್ಸ್ ಚಿತ್ರೀಕರಣಕ್ಕಾಗಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.

ಎ.ಪಿ ಅರ್ಜುನ್ ನಿರ್ದೇಶನದ `ಅದ್ದೂರಿ’ ಚಿತ್ರದ ಮೂಲಕ ಧ್ರುವಾ ಸರ್ಜಾ ಎಂಟ್ರಿ ಕೊಟ್ಟಿದ್ದರು. ಮೊದಲ ಚಿತ್ರದಲ್ಲೇ ಭರ್ಜರಿ ಸಕ್ಸಸ್ ಕಂಡು ಗಾಂಧಿನಗರದ ಆ್ಯಕ್ಷನ್ ಪ್ರಿನ್ಸ್ ಆಗಿ ರಾರಾಜಿಸುತ್ತಿದ್ದಾರೆ. `ಪೊಗರು’ ಸೂಪರ್ ಹಿಟ್ ನಂತರ ಈಗ ಎ.ಪಿ ಜತೆ ಮತ್ತೆ ಧ್ರುವಾ ಸರ್ಜಾ ಕೈ ಜೋಡಿದ್ದಾರೆ. ಇದನ್ನೂ ಓದಿ:71,000 ರೂ. ಸೀರೆಯುಟ್ಟು ಬಂದ ಹನ್ಸಿಕಾ ಮೋಟ್ವಾನಿ

ಮಾರ್ಟಿನ್‌ಗಾಗಿ ಒಂದಾಗಿರುವ ಧ್ರುವಾ ಮತ್ತು ಎ.ಪಿ ಅರ್ಜುನ್ ಸದ್ಯ ಈ ಚಿತ್ರದ ಕೊನೆಯ ಹಂತದ ಚಿತ್ರೀಕರಣಕ್ಕೆ ಬಂದು ತಲುಪಿದೆ. ಸೆಪ್ಟೆಂಬರ್ ೩೦ಕ್ಕೆ ತೆರೆಗೆ ಬರಲಿರುವ ಈ ಚಿತ್ರದ ಆ್ಯಕ್ಷನ್ ಸಿಕ್ವೇನ್ಸ್ ಮತ್ತು ಎರಡು ಹಾಡು ಬಾಕಿಯಿದೆ. ಸ್ಟಂಟ್ ಮಾಸ್ಟರ್ ರವಿ ವರ್ಮಾ ಸಾರಥ್ಯದಲ್ಲಿ ಆ್ಯಕ್ಷನ್ ಸೀನ್ಸ್ ಮೂಡಿಬರಲಿದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಜತೆಗೆ ಜನಪ್ರಿಯ ಸ್ಟಂಟ್ ಮಾಸ್ಟರ್ಸ್‌ ರಾಮ ಲಕ್ಷ್ಮಣ ಕೂಡ ಚಿತ್ರತಂಡಕ್ಕೆ ಸಾಥ್ ನೀಡುತ್ತಿದ್ದಾರೆ.

ಧೃವಾ ಸರ್ಜಾಗೆ ನಾಯಕಿಯಾಗಿ ವೈಭವಿ ಕಾಣಿಸಿಕೊಂಡಿದ್ದು, ಬಾಲಿವುಡ್ ನಟ ನಿಕಿತ್, ಅನ್‌ವೇಷಿ ಜೈನ್ ಕೂಡ ಸಾಥ್ ನೀಡಿದ್ದಾರೆ. ಸದ್ಯದಲ್ಲೇ ಬಹುಭಾಷೆಗಳಲ್ಲಿ ಉದಯ್ ಕೆ ಮೆಹ್ತಾ ನಿರ್ಮಾಣದ `ಮಾರ್ಟಿನ್’ ಚಿತ್ರ ತೆರೆಗೆ ಅಬ್ಬರಿಸುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Exit mobile version