Bengaluru CityCinemaDistrictsKarnatakaLatestMain PostSandalwood

ನಿಮ್ಮ ಪ್ರೋತ್ಸಾಹ, ಬೆಂಬಲ ನನಗೆ ಶ್ರೀರಕ್ಷೆ : ಧ್ರುವ ಸರ್ಜಾ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಆ್ಯಕ್ಷನ್ ಪ್ರಿನ್ಸ್  ಧ್ರುವ ಸರ್ಜಾ ಈ ಬಾರಿ ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ.

ಪ್ರತಿವರ್ಷ ಅಕ್ಟೋಬರ್ 6ರಂದು ಸ್ನೇಹಿತರು ಹಾಗೂ ಅಭಿಮಾನಿಗಳೊಂದಿಗೆ ಬಹಳ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ಧ್ರುವ ಸರ್ಜಾ ಅವರು, ಈ ಬಾರಿ ಕೋವಿಡ್ ಕಾರಣಾಂತರದಿಂದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಕುರಿತಂತೆ ಧ್ರುವ ಸರ್ಜಾ ವೀಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶಾರೂಖ್ ಮನೆಗೆ ಭೇಟಿ ಕೊಟ್ಟ ಸಲ್ಮಾನ್ ಖಾನ್

ವೀಡಿಯೋದಲ್ಲಿ, ಇದೇ ಅಕ್ಟೋಬರ್ 6 ನೇ ತಾರಿಖು ನನ್ನ ಹುಟ್ಟುಹಬ್ಬ ಇದೆ. ನಾನು ದೊಡ್ಡ ಸೆಲಿಬ್ರೆಟಿ ಅಲ್ಲ, ಆದರೂ ಈ ಬಾರಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಮನಸ್ಸು ನನಗಿಲ್ಲ ಎಂದು ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ. ಇದನ್ನೂ ಓದಿ: ಸುಂದರ್ ರಾಜ್, ಸರ್ಜಾ ಫ್ಯಾಮಿಲಿ ಸದಾ ಒಂದಾಗಿರುತ್ತದೆ: ಧ್ರುವ ಸರ್ಜಾ

ಕೋವಿಡ್ ಕಾರಣದಿಂದಾಗಿ ಹಾಗೂ ನಾನು ಊರಿನಲ್ಲಿ ಇರುವುದಿಲ್ಲ. ಶೂಟಿಂಗ್‍ಗಾಗಿ ವಿಶಾಖಪಟ್ಟಕ್ಕೆ ಹೋಗುತ್ತಿದ್ದೇನೆ. ಹೀಗಾಗಿ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಪ್ರತಿ ವರ್ಷ ನನ್ನ ಹುಟ್ಟುಹಬ್ಬದ ದಿನ ನಿಮ್ಮ ಮನೆಯ ಹುಡುಗ ಎಂದು ನನ್ನ ಎಲ್ಲಾ ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು, ಎಲ್ಲಾ ತಾಯಂದಿರು ಹೇಗೆ ಆಶೀರ್ವಾದ ಮಾಡಿದ್ದೀರಾ ಹಾಗೇ ಈ ಬಾರಿಯೂ ನನಗೆ ಆಶೀರ್ವಾದ ಮಾಡಿ. ಪ್ರೋತ್ಸಾಹ ಮತ್ತು ಬೆಂಬಲ ನನಗೆ ಶ್ರೀರಕ್ಷೆ ಎಂದು ಹೇಳಿದ್ದಾರೆ.

 

View this post on Instagram

 

A post shared by Dhruva Sarja (@dhruva_sarjaa)

ಸದ್ಯ ಧ್ರುವ ಸರ್ಜಾ ಅವರು ನಿರ್ದೇಶಕ ಎ.ಪಿ ಅರ್ಜುನ್ ಆ್ಯಕ್ಷನ್ ಕಟ್ ಹೇಳಿದ್ದ ಮಾರ್ಟಿನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಈ ಸಿನಿಮಾ ಧ್ರುವ ಸರ್ಜಾ ಹಾಗೂ ಎ.ಪಿ ಅರ್ಜುನ್ ಕಾಂಬೀನೇಷನ್‍ನಲ್ಲಿ ಬರುತ್ತಿರುವ ಎರಡನೇ ಸಿನಿಮಾವಾಗಿದ್ದು, ಈ ಮುನ್ನ ಎ.ಪಿ ಅರ್ಜುನ್ ನಿರ್ದೇಶಿಸಿದ್ದ ಅದ್ದೂರಿ ಸಿನಿಮಾದಲ್ಲಿ ಧ್ರುವ ನಟಿಸಿದ್ದರು. ಅಲ್ಲದೇ ಧ್ರುವ ಸರ್ಜಾ ಅವರು ನಿರ್ದೇಶಕ ಜೋಗಿ ಪ್ರೇಮ್ ಸಿನಿಮಾದಲ್ಲಿ ಕೂಡ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಗಾಂಧೀನಗರದಲ್ಲಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

Back to top button