ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ‘ಮಾರ್ಟಿನ್’ ಸಿನಿಮಾ ರಿಲೀಸ್ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಬೆನ್ನಲ್ಲೇ ಇದೀಗ ‘ಕೆಡಿ’ (KD Film) ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಧ್ರುವ ಸಿನಿಮಾಗಳಿಗಾಗಿ ಕಾದು ಕುಳಿತವರಿಗೆ ಖುಷಿ ಸುದ್ದಿ ಸಿಕ್ಕಿದೆ. ಇದನ್ನೂ ಓದಿ:‘ಪುಷ್ಪ 2’ ಪೋಸ್ಟರ್ ಔಟ್ -ಖಡಕ್ ಲುಕ್‌ನಲ್ಲಿ ರಾವ್ ರಮೇಶ್
ತೆಲಂಗಾಣದಲ್ಲಿ ಚಿತ್ರರಂಗದ ಚಿತ್ರಮಂದಿರ ಬಂದ್ ಆದ್ಮೇಲೆ ಕರ್ನಾಟಕದಲ್ಲಿ ಚಿತ್ರಮಂದಿರ ಬಂದ್ ಮಾಡುವ ಬಗ್ಗೆ ಅಪಸ್ವರ ಎದ್ದಿತ್ತು. ಯಾವುದೇ ಕಾರಣಕ್ಕೂ ಥಿಯೇಟರ್ ಬಂದ್ ಮಾಡಲ್ಲ ಎಂದು ಅಧಿಕೃತ ಘೋಷಣೆ ಮಾಡಲಾಯ್ತು. ಸ್ಟಾರ್ ನಟರ ಸಿನಿಮಾಗಳು ತಡ ಆಗ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಧ್ರುವ ನಟನೆಯ 2 ಬಿಗ್ ಬಜೆಟ್ ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಧ್ರುವ ನಟನೆಯ ‘ಮಾರ್ಟಿನ್’ (Martin Film) ಚಿತ್ರ ಅಕ್ಟೋಬರ್ 11ಕ್ಕೆ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಡೈರೆಕ್ಟರ್ ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾ ಕೆಡಿ ಸಿನಿಮಾಗೂ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಕೆಡಿ ಸಿನಿಮಾ ಇದೇ ಡಿಸೆಂಬರ್‌ನಲ್ಲಿ ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.
ಈ ಚಿತ್ರದಲ್ಲಿ ಧ್ರುವಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ (Reeshma Nanaiah), ಶಿಲ್ಪಾ ಶೆಟ್ಟಿ (Shilpa Shetty), ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್ ಸೇರಿದಂತೆ ಸ್ಟಾರ್ ಕಲಾವಿದರ ದಂಡೇ ಇದೆ. ಈ ಚಿತ್ರವನ್ನು ಕೆವಿಎನ್ ಸಂಸ್ಥೆ ಅದ್ಧೂರಿಯಾಗಿ ನಿರ್ಮಾಣ ಮಾಡಿದೆ.