ಅಪ್ಪ ಮಗಳ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್

Public TV
1 Min Read
C 2

‘ಸಿ’ ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದೀವಿ ಅಂತನೂ ಅಂದ್ಕೊಬೇಡಿ… ‘ಸಿ’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನ ವನದಲ್ಲಿ ಶ್.. ಸೈ.. ಎ.. ಓಂ… ಹೀಗೆ ಒಂದೇ ಅಕ್ಷರದ ಹೆಸರಿನ ಮೂವಿಗಳನ್ನು ನೋಡಿದ್ದೀರಾ, ಇದೀಗ ಅದೇ ಸಾಲಿಗೆ ‘ಸಿ’ ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ.

C 1

ಕಿರಣ್ ಸುಬ್ರಮಣಿ (Kiran Subramani) ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ  ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡರೆ ಮಗಳಾಗಿಮಿಂಚಿದ್ದಾಳೆ.

C 3

ಈ ಸುಂದರ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ರಿಲೀಸ್ ಮಾಡಿರುವುದು ವಿಶೇಷ. ಮುದ್ದು ಮಗಳ ಜೊತೆ ಸಂಭ್ರಮಿಸುತ್ತಿರುವ ಧ್ರುವ ಸಿ ಸಿನಿಮಾದ ಸುಂದರ ಹಾಡನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೆ ‘ಕಂದಾ…ಕಂದಾ..’ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್  ಹಾಡಿದ್ದಾರೆ.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ. ಈ ಸಿನಿಮಾ ತಂದೆ- ಮಗಳ ಬಾಂಧವ್ಯದ ಜೊತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ.

Share This Article