ಬೆಂಗಳೂರು: ಸ್ಯಾಂಡಲ್‍ವುಡ್ ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬಕ್ಕೆ ಅವರ ಪತ್ನಿ ಪ್ರೇರಣಾ ಹಳೆಯ ಫೋಟೋವೊಂದನ್ನು ಹಂಚಿಕೊಂಡು ವಿಶ್ ಮಾಡಿರುವುದು ವಿಶೇಷವಾಗಿದೆ.
ಇದು 10 ವರ್ಷಗಳ ಹಿಂದಿನ ಫೋಟೋ. ಹೆಂಡತಿಯಾಗಿ ನಾನು ಯಾವಾಗಲೂ ನಿಮ್ಮನ್ನು ಪ್ರೀತಿಸುತ್ತೇನೆ. ಜನ್ಮದಿನದ ಶುಭಾಶಯಗಳು ಎಂದು ಬರೆದುಕೊಂಡು ಇಬ್ಬರು ಜೊತೆಗೆ ಇರುವ ಮುದ್ದಾದ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಿಮ್ಮ ಪ್ರೋತ್ಸಾಹ, ಬೆಂಬಲ ನನಗೆ ಶ್ರೀರಕ್ಷೆ : ಧ್ರುವ ಸರ್ಜಾ
ಧ್ರುವ ಅಭಿಮಾನಿಗಳು ಜೈ ಆಂಜನೇಯ, ಧ್ರುವ ಅಣ್ಣ, ಮಗುವಿನ ಮನಸಿರೋ ಮಹಾರಾಜ ಎಂದು ಕಾಮೆಂಟ್ ಮಾಡುತ್ತಾ ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ಇದನ್ನೂ ಓದಿ: ಶಾರೂಖ್ ಮನೆಗೆ ಭೇಟಿ ಕೊಟ್ಟ ಸಲ್ಮಾನ್ ಖಾನ್
View this post on Instagram
ಪ್ರತಿವರ್ಷ ಅಕ್ಟೋಬರ್ 6ರಂದು ಸ್ನೇಹಿತರು ಹಾಗೂ ಅಭಿಮಾನಿಗಳೊಂದಿಗೆ ಬಹಳ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ಧ್ರುವ ಸರ್ಜಾ, ಈ ಬಾರಿ ಕೋವಿಡ್ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಕುರಿತಂತೆ ಧ್ರುವ ಸರ್ಜಾ ವೀಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ದಿನಗಳ ಹಿಂದೆ ವೀಡಿಯೋವೊಂದನ್ನು ಹಂಚಿಕೊಂಡಿದ್ದರು.
ವೀಡಿಯೋದಲ್ಲಿ ಇದೇ ಅಕ್ಟೋಬರ್ 6 ನೇ ತಾರಿಖು ನನ್ನ ಹುಟ್ಟುಹಬ್ಬ ಇದೆ. ನಾನು ದೊಡ್ಡ ಸೆಲೆಬ್ರಿಟಿ ಅಲ್ಲ, ಆದರೂ ಈ ಬಾರಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಮನಸ್ಸು ನನಗಿಲ್ಲ ಎಂದು ಅಭಿಮಾನಿಗಳಲ್ಲಿ ವಿನಂತಿಸಿದ್ದರು.
33ನೇ ವಸಂತಕ್ಕೆ ಕಾಲಿಟ್ಟಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.