LatestLeading NewsMain PostSports

ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ನೀರಜ್ ಚೋಪ್ರಾಗೆ ವಜ್ರದ ಕಿರೀಟ

Advertisements

ಸ್ಟಾಕ್ಹೋಮ್: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಕ್ರೀಡಾತಾರೆ ನೀರಜ್ ಚೋಪ್ರಾ ಸ್ವೀಡನ್‌ನ ಸ್ಟಾಕ್ಹೋಮ್‌ನಲ್ಲಿ ನಡೆದ ಡೈಮಂಡ್ ಲೀಗ್-2022 ನಲ್ಲಿ ಮತ್ತೊಂದು ಗೆಲುವು ಸಾಧಿಸುವ ಮೂಲಕ ತಮ್ಮದೇ ದಾಖಲೆ ಮುರಿದಿದ್ದಾರೆ.

ಡೈಮಂಡ್ ಲೀಗ್‌ನಲ್ಲಿ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ 89.94 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಸಾಧನೆ ಮಾಡಿದ್ದು, ಕಳೆದ ಒಂದು ತಿಂಗಳಿನಲ್ಲಿ 2ನೇ ಬಾರಿ ಅಂತಾರಾಷ್ಟ್ರೀಯ ದಾಖಲೆ ಬರೆದ ಕೀರ್ತಿ ಪಡೆದುಕೊಂಡಿದ್ದಾರೆ. ಮುಖ್ಯವಾಗಿ ಕಳೆದ 4 ವರ್ಷಗಳಲ್ಲಿ ಮೊದಲ ಬಾರಿಗೆ ತಮ್ಮ ಡೈಮಂಡ್ ಲೀಗ್ ಮರಳಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಯಾನ್ ಮಾರ್ಗನ್ ವಿದಾಯ

ಚೋಪ್ರಾ ಸ್ಟಾಕ್‌ಹೋಮ್ ಡೈಮಂಡ್ ಲೀಗ್‌ನಲ್ಲಿ 89.94 ಮೀಟರ್‌ಗಳ ಜಾವೆಲಿನ್ ಎಸೆಯುವ ಮೂಲಕ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಲೀಗ್‌ನಲ್ಲಿ ಒಟ್ಟು 6 ಎಸೆತಗಳನ್ನು ನಿಗದಿಪಡಿಸಲಾಗಿತ್ತು. ಆದರೆ ಚೋಪ್ರಾ ಮೊದಲ ಎಸೆತದಲ್ಲಿ 89.94 ಮೀಟರ್, 2ನೇ ಎಸೆತದಲ್ಲಿ 84.37 ಮೀಟರ್, 3ನೇ ಎಸೆತದಲ್ಲಿ 87.46 ಮೀಟರ್, 4ನೇ ಎಸೆತದಲ್ಲಿ 84.77 ಮೀಟರ್, 5ನೇ ಎಸೆತದಲ್ಲಿ 86.67 ಮೀಟರ್, 6ನೇ ಎಸೆತದಲ್ಲಿ 86.84 ಮೀಟರ್ ಎಸೆದಿದ್ದರು. ಆದರೆ ಮೊದಲ ಎಸೆತದಲ್ಲೇ ಪರಾಕ್ರಮ ಮೆರೆದು ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.

ನೀರಜ್ ಚೋಪ್ರಾ ಈಚೆಗೆ ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಗೇಮ್ಸ್ನಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 86.69 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ಇದನ್ನೂ ಓದಿ: ಕಪಿಲ್ ದೇವ್ ನಂತರ 35 ವರ್ಷಗಳ ಬಳಿಕ ಭಾರತದ ನಾಯಕತ್ವ ಪಡೆದ ವೇಗಿ – ಬುಮ್ರಾ ಕ್ಯಾಪ್ಟನ್, ಪಂತ್ ವೈಸ್ ಕ್ಯಾಪ್ಟನ್

ಇದಕ್ಕೂ ಮುನ್ನ ಫಿನ್‌ಲ್ಯಾಂಡ್‌ನಲ್ಲಿ ಪಾವೊ ನೂರ್ಮಿ ಗೇಮ್ಸ್ನಲ್ಲಿ ನೀರಜ್ ಚೋಪ್ರಾ 89.30 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದರು, ಈ ಮೂಲಕ ತಮ್ಮದೇ ದಾಖಲೆ ಮುರಿದಿದ್ದರು.

ಡೈಮಂಡ್ ಲೀಗ್‌ನಲ್ಲಿ ನೀರಜ್ ಸಾಧನೆ:
ಮೊದಲ ಎಸೆತ 89.94
2ನೇ ಎಸೆತ 84.37
3ನೇ ಎಸೆತ 87.46
4ನೇ ಎಸೆತ 84.77
5ನೇ ಎಸೆತ 86.67
6ನೇ ಎಸೆತ 86.84

Live Tv

Leave a Reply

Your email address will not be published.

Back to top button