ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಿರುದ್ಧ ತಾಜ್ ವೆಸ್ಟ್ ಎಂಡ್ ಹೊಟೇಲ್ ವಿಷಯ ಪ್ರಸ್ತಾಪ ಮಾಡಿ, ಕೆಎಸ್‌ಟಿ ಟ್ಯಾಕ್ಸ್ ಆರೋಪ ಮಾಡಿದ್ದ ಕಾಂಗ್ರೆಸ್‌ಗೆ ಜೆಡಿಎಸ್ (JDS) ಕೌಂಟರ್ ಕೊಟ್ಟಿದೆ. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಡೆತನದ ಲೂಲೂ ಮಾಲ್ ವಿಷಯ ಪ್ರಸ್ತಾಪ ಮಾಡಿ ಕಾಂಗ್ರೆಸ್ (Congress) ಮತ್ತು ಸಿದ್ದರಾಮಯ್ಯ (Siddaramaiah) ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.
ಸರಣಿ ಟ್ವೀಟ್ ಮಾಡಿರೋ ಜೆಡಿಎಸ್ ಸಿಎಂ ಸಿದ್ದರಾಮಯ್ಯ ಅವರನ್ನು ಬೂಟಾಟಿಕೆ ದಾಸಯ್ಯ ಎಂದು ಲೇವಡಿ ಮಾಡಿದೆ. ಅಷ್ಟೇ ಅಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಲೂಲೂ ಕುಮಾರ್ ಎಂದು ತರಾಟೆಗೆ ತೆಗೆದುಕೊಂಡಿದೆ.
Advertisement
Advertisement
ಜೆಡಿಎಸ್ ಟ್ವೀಟ್‌ನಲ್ಲೇನಿದೆ?
ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆಹಂಗಿದೆ ನೋಡಿ ಕಮೀಷನ್ ಕಾಂಗ್ರೆಸ್‌ನ ಹೊಸ ವರಸೆ ಮತ್ತು ಹೊಸ ಕಸವರಿಕೆ.
Advertisement
ವೆಸ್ಟ್ʼಎಂಡ್ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ!! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ!? 4/4#LuLuKumar
— Janata Dal Secular (@JanataDal_S) July 5, 2023
Advertisement
ವೆಸ್ಟ್ ಎಂಡ್ ಲೆಕ್ಕ ಇರಲಿ, ಸಿಎಂ ಟಿಪ್ಪಣಿ ಬಿಕರಿಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ. ಇದ್ಯಾವ ಸೀಮೆ ಅರ್ಥಶಾಸ್ತ್ರ? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ. ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ ವೈಎಸ್‌ಟಿ ಟ್ಯಾಕ್ಸ್ ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ. ಪಾಪ ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ.
ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ವೈಎಸ್‌ಟಿ ಟ್ಯಾಕ್ಸ್ ಬಗ್ಗೆ ಹೇಳಿ, ಕಾಸಿಗಾಗಿ ಹುದ್ದೆ ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ಅವಿವೇಕ ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ ಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ
ವೆಸ್ಟ್ ಎಂಡ್ ಬಾಡಿಗೆ ಮಾತಿರಲಿ, ಲೂಲೂ ಮಾಲ್ ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲೂಲೂ ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ಲೂಲೂ ಕುಮಾರ್‌ಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ. ಹಾಗಿದ್ದರೆ ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ!? ಎಂದು ಕಾಂಗ್ರೆಸ್, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಸರಣಿ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮತ್ತೊಂದು ಟೋಲ್ ಆರಂಭ ಎಫೆಕ್ಟ್ – ಬಸ್ ಟಿಕೆಟ್ ದರ ಏರಿಕೆ
Web Stories