ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ (Delhi Elections) ಹೊತ್ತಲ್ಲೇ ಬಜೆಟ್ ಮೂಲಕ ಮಧ್ಯಮ ವರ್ಗದ ಮತಗಳ ಮೇಲೆ ಬಿಜೆಪಿ (BJP) ಕೇಂದ್ರೀಕರಿಸಿದೆ.
12 ಲಕ್ಷದವರೆಗೂ ತೆರಿಗೆ ವಿನಾಯತಿ ನೀಡಿದ್ದು ಇದು ರಾಷ್ಟ್ರ ರಾಜಧಾನಿಯಲ್ಲಿರುವ ಮಧ್ಯಮ ವರ್ಗದ 45% ಮತದಾರರ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಇದನ್ನೂ ಓದಿ: ಕಿಸಾನ್ ಕ್ರೆಡಿಟ್‌ಕಾರ್ಡ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ – 2028ರ ವರೆಗೂ ಜಲಜೀವನ್ ಮಿಷನ್ ವಿಸ್ತರಣೆ
Advertisement
Advertisement
ದೆಹಲಿ ಕೇಂದ್ರಿತ ಯಾವುದೇ ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿತ್ತು, ಈ ನಡುವೆ ಆದಾಯ ತೆರಿಗೆಯಲ್ಲಿ ವಿನಾಯತಿ ನೀಡಿರುವುದು ಚುನಾವಣೆಯಲ್ಲಿ ಬಿಜೆಪಿ ನಾಯಕರಿಗೆ ಶಕ್ತಿ ತುಂಬಿದಂತಾಗಲಿದೆ. 2020ರಲ್ಲಿ, ಮಧ್ಯಮ ವರ್ಗದ ಬೆಂಬಲದಿಂದ ಆಮ್ ಆದ್ಮಿ ಪಕ್ಷ ಗೆಲುವಿನತ್ತ ಸಾಗಿತು.
Advertisement
2024ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಿದ್ದು ಇದೇ ಮಧ್ಯಮ ವರ್ಗ, ಈಗ ಬಜೆಟ್ ನಲ್ಲೂ ಪ್ರಧಾನಿ ನರೇಂದ್ರ ಮೋದಿ ಮಧ್ಯಮ ವರ್ಗವನ್ನು ಕೇಂದ್ರೀಕರಿಸಿದ್ದು ಆದಾಯ ತೆರಿಗೆ ಮಿತಿ ಸಡಿಲಿಕೆಯಿಂದ ಬಿಜೆಪಿಯತ್ತ ದೆಹಲಿಯಲ್ಲಿ ಒಲವು ಹೆಚ್ಚಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: Budget 2025: ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ