Wednesday, 22nd January 2020

40 ರಿಂದ 80ಲಕ್ಷ ರೂ.ಗೆ ಸಂಭಾವನೆ ಹೆಚ್ಚಿಸಿದ್ದು ಏಕೆ?: ರಶ್ಮಿಕಾ ಸ್ಪಷ್ಟನೆ

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತಮ್ಮ ಸಂಭಾವನೆ ಹೆಚ್ಚಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಈಗ ತಾನು ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಮೋಶನ್‍ಗಾಗಿ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಪತ್ರಕರ್ತರು ಸಂಭಾವನೆ ಹೆಚ್ಚಿಸಿದ್ದು ಏಕೆ ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಶ್ಮಿಕಾ, ಸಂಭಾವನೆ ಹೆಚ್ಚಿಸಿಕೊಳ್ಳುವುದು ಸಾಮಾನ್ಯ. ನಾನು 2 ವರ್ಷದಿಂದ ಚಿತ್ರರಂಗದಲ್ಲಿ ಇದ್ದೇನೆ ಹಾಗೂ ನಾನು ಸಿನಿಮಾರಂಗದಲ್ಲಿ ಬೆಳೆಯುತ್ತಿದ್ದೇನೆ. ಹಾಗಾಗಿ ನಾನು ನನ್ನ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದೇನೆ ಎಂದರು.

ಇದಾದ ಬಳಿಕ ರಶ್ಮಿಕಾ, ನೀವು ಈಗ ಪ್ರಮೋಶನ್ ಹಾಗೂ ಒಳ್ಳೆಯ ಸಂಭಾವನೆ ಕೇಳುವುದಿಲ್ಲವೇ? ಎಂದು ಪತ್ರಕರ್ತರನ್ನು ಪ್ರಶ್ನಿಸಿದ್ದರು. ಹಾಗೆಯೇ ನಾನು ಕಡಿಮೆ ಸಂಭಾವನೆಗೆ ಕೆಲಸ ಮಾಡುವುದಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ.

ರಶ್ಮಿಕಾ ಒಂದು ಸಿನಿಮಾಗೆ 40 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದರು. ಬಳಿಕ ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳನ್ನು ನೀಡಿದ್ದಕ್ಕೆ ಅವರು 60 ಲಕ್ಷ ರೂ. ಯಿಂದ 80 ಲಕ್ಷ ರೂ. ವರೆಗೂ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ.

ರಶ್ಮಿಕಾ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜೊತೆ ನಟಿಸುತ್ತಿರುವ ‘ಪೊಗರು’ ಚಿತ್ರಕ್ಕೆ 64 ಲಕ್ಷ ರೂ. ಸಂಭಾವನೆ ಪಡೆದಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *