ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ವರ್ತೂರ್ ಸಂತೋಷ್ (Varthur Santhosh) ಹೇಳಿದ್ದಾರೆ ಎನ್ನಲಾದ ಮಾಹಿತಿಯನ್ನು ಸಖತ್ ಸೌಂಡ್ ಮಾಡುತ್ತಿದೆ. ತಾವು ಧರಿಸಿದ್ದ ಹುಲಿ ಉಗುರನ್ನು (Tiger Claw) ಅವರು 20 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದರಂತೆ. ಹಾಗಂತ ಅರಣ್ಯಾಧಿಕಾರಿಗಳಿಗೆ ಸಂತೋಷ್ ಹೇಳಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.
Advertisement
ಇಕ್ಕಟ್ಟಿನಲ್ಲಿ ಸೆಲೆಬ್ರಿಟಿಗಳು
Advertisement
ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil) ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಸೆಲೆಬ್ರಿಟಿಗಳ ಮೇಲೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ಸಾಕಷ್ಟು ಸದ್ದು ಆಗುತ್ತಿದ್ದಂತೆಯೇ ನಿಖಿಲ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.
Advertisement
Advertisement
‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು ಅಲ್ಲದೇ, ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಎಲ್ಲರಿಗೂ ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಅರಣ್ಯಾ ಇಲಾಖೆಯ ಅಧಿಕಾರಿಗಳ ಕಚೇರಿಗೆ ಸಾಲು ಸಾಲು ದೂರುಗಳು ಬರುತ್ತಿವೆ. ಜನತಾ ಪಕ್ಷದ ನಾಗೇಶ್ ಅವರು ಜಗ್ಗೇಶ್ ಮತ್ತು ದರ್ಶನ್ ಅವರ ಮೇಲೆ ದೂರು ನೀಡಿದ್ದು, ‘ಬಿಜೆಪಿ ಮುಖಂಡ ಜಗ್ಗೇಶ್ ಅವರು ಹುಲಿ ಉಗುರಿನ ಬಗ್ಗೆ ಮಾತನಾಡಿದ್ದಾರೆ. ಆದರೂ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಬಡವರು, ರೈತರು, ವನ್ಯ ಜೀವಿಗಳನ್ನು ಕೊಂದು ಕೇಸ್ ಹಾಕ್ತಾರೆ. ಜಗ್ಗೇಶ್, ದರ್ಶನ್, ವಿನಯ್ ಗುರೂಜಿ ಮೇಲೆ ಕ್ರಮ ಯಾಕೆ ತಗೆದುಕೊಂಡಿಲ್ಲ’ ಎಂದು ಕೇಳಿದ್ದಾರೆ.
Web Stories