Connect with us

ಡೀಸೆಲ್ ದರ ದಾಖಲೆ ಏರಿಕೆ, ಪೆಟ್ರೋಲ್ ದರವೂ ಹೆಚ್ಚಾಯ್ತು!

ಡೀಸೆಲ್ ದರ ದಾಖಲೆ ಏರಿಕೆ, ಪೆಟ್ರೋಲ್ ದರವೂ ಹೆಚ್ಚಾಯ್ತು!

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್ ಸಾರ್ವಕಾಲಿಕ ಗರಿಷ್ಟ ದರ ತಲುಪಿದರೆ, ಪೆಟ್ರೋಲ್ ಮೂರುವರೆ ವರ್ಷಗಳ ಗರಿಷ್ಟ ಮಟ್ಟ ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ 61.74ರೂ.ಗೆ ಮತ್ತು ಪೆಟ್ರೋಲ್ ಬೆಲೆ 71ರೂ. ಏರಿಕೆಯಾಗಿದೆ.

ಇಂಡಿಯನ್ ಆಯಿಲ್ ಕಾರ್ಪೋ ರೇಶನ್ ವೆಬ್ ಸೈಟ್ ಪ್ರಕಾರ, ದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ ಪ್ರತೀ ಲೀಟರ್ ಗೆ 71.18 ರೂ., ಕೋಲ್ಕತ್ತಾದಲ್ಲಿ 73.91ರೂ., ಮುಂಬೈನಲ್ಲಿ 79.06 ರೂ., ಹಾಗೂ ಚೆನ್ನೈನಲ್ಲಿ 73.80 ರೂ.ಆಗಿದೆ.

ದೆಹಲಿಯಲ್ಲಿ ಡೀಸೆಲ್ ಬೆಲೆ 61.74ರೂ., ಕೋಲ್ಕತ್ತಾದಲ್ಲಿ 64.40 ರೂ., ಮುಂಬೈನಲ್ಲಿ 65.74 ರೂ. ಹಾಗೂ ಚೆನ್ನೈ ನಲ್ಲಿ 65.08 ರೂ. ಆಗಿದೆ.

ಡಿಸೆಂಬರ್ 12ರಿಂದ ಡೀಸೆಲ್, ಪೆಟ್ರೋಲ್ ದರ ನಿರಂತರ ಏರಿಕೆಯಾಗುತ್ತಿದೆ. ದೆಹಲಿಯಲ್ಲಿ ಕಳೆದ ತಿಂಗಳಿನಲ್ಲಿ ಡೀಸೆಲ್ ದರದಲ್ಲಿ 3.4 ರೂ. ಹೆಚ್ಚಾಗಿತ್ತು. ಇದೇ ಅವಧಿಯಲ್ಲಿ ಪೆಟ್ರೋಲ್ ಬೆಲೆ 2.09 ರೂ. ಹೆಚ್ಚಳವಾಗಿದೆ. ನಾಲ್ಕು ತಿಂಗಳ ಹಿಂದಿನ ದರಕ್ಕೆ ಹೋಲಿಸಿದರೆ ಡೀಸೆಲ್ 5.26 ರೂ.ಏರಿಕೆಯಾಗಿದ್ದರೆ, ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 1.45 ರೂ. ಏರಿಕೆಯಾಗಿದೆ. ಇದನ್ನೂ ಓದಿ: 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದರೆ ಜನ ಸಾಮಾನ್ಯರ ಮೇಲಿನ ಹೊರೆಯನ್ನು ತಕ್ಕಮಟ್ಟಿಗೆ ಇಳಿಸಬಹುದು. 2017ರ ಅಕ್ಟೋಬರ್ನಲ್ಲಿ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 56.89 ರೂ. ಮತ್ತು 68.38 ರೂ.ಗೆ ಇಳಿದಿತ್ತು. ಹೀಗಿದ್ದರೂ, ನಂತರ ಅಂತರಾಷ್ಟ್ರೀಯ ದರ ಏರಿಕೆಯಿಂದ ತೈಲ ದರ ಹೆಚ್ಚಳವಾಗಿದೆ ಎಂಬುದಾಗಿ ವರದಿಯಾಗಿದೆ.

2017ರ ಅಕ್ಟೋಬರ್ 3ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿತ್ತು. ಬೆಲೆ ಏರಿಕೆಯಂದ ಜನಸಾಮಾನ್ಯರ ಮೇಲೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಡಳಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿತ್ತು. ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

2014ರಿಂದ 2016ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ವಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ.ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

 

Advertisement
Advertisement