ಯಾದಗಿರಿ: ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರೊಂದು ಪಲ್ಟಿಯಾದ ಘಟನೆ ಶಹಾಪೂರ ತಾಲೂಕಿನ ಹುಲಕಲ್ ಗ್ರಾಮದ ಬಳಿ ನಡೆದಿದೆ.
ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದೆ. ಈ ಸಮಯದಲ್ಲಿ ಯಾವುದೇ ವಾಹನಗಳು ಸಂಚರಿಸಿದ ಕಾರಣ ಭಾರೀ ದುರಂತ ತಪ್ಪಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಟ್ಯಾಂಕರ್ ನಲ್ಲಿದ್ದ ಡಿಸೇಲ್ ಸೊರಿಕೆಯಾಗುತ್ತಿರುವುದನ್ನು ಕಂಡ ಗ್ರಾಮಸ್ಥರು ಡಬ್ಬಿ ಹಾಗೂ ಬಕೆಟ್ ಗಳಲ್ಲಿ ಡಿಸೇಲ್ ತುಂಬಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.
ಭೀಮರಾಯನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.