KarnatakaLatestLeading NewsMain PostUttara Kannada

ಶಿರಸಿಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ 1 ರೂ. ಇಳಿಕೆ

ಕಾರವಾರ: ಪೆಟ್ರೋಲ್, ಡೀಸೆಲ್ ಬೆಲೆ ರಾಜ್ಯದಲ್ಲಿಯೇ ಶಿರಸಿಯಲ್ಲಿ ಗರಿಷ್ಠವಾಗಿದೆ. ಈ ಕುರಿತಂತೆ ಶಿರಸಿ ವೈದ್ಯರೊಬ್ಬರ ಸಲಹೆ ಸ್ವೀಕರಿಸಿದ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಶಿರಸಿ ಗ್ರಾಹಕರಿಗೆ 1 ರೂ. ರಷ್ಟು ಇಂಧನ ದರ ಕಡಿಮೆ ಮಾಡಿದೆ.

ಕೇಂದ್ರಕ್ಕೆ ವಿವರವಾದ ಪತ್ರ ಬರೆದಿದ್ದ ಡಾ. ರವಿಕಿರಣ ಪಟವರ್ಧನ್
ಶಿರಸಿ ಪಟ್ಟಣದ ಖ್ಯಾತ ಆಯುರ್ವೇದ ವೈದ್ಯರಾದ ಡಾ. ರವಿಕಿರಣ ಪಟವರ್ಧನ್ ಕಳೆದ ಜೂನ್ ಮೊದಲ ವಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದಲ್ಲೇ ಶಿರಸಿಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಿರುವುದನ್ನು ಉಲ್ಲೇಖಿಸಿ ಪತ್ರ ಬರೆದಿದ್ದರು. ಶಿರಸಿಗೆ ದೂರದ ಮಂಗಳೂರಿನಿಂದ ಇಂಧನ ಪೂರೈಸಲಾಗುತ್ತಿದೆ. ಹೀಗಾಗಿ ಸಾಗಾಟ ವೆಚ್ಛ ಅನಗತ್ಯವಾಗಿ ಗ್ರಾಹಕರ ಮೇಲೆ ಬೀಳುತ್ತಿರುವ ಅಂಶವನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದರು. ಇದನ್ನೂ ಓದಿ: ಸಂಧಾನಕ್ಕೂ ಸಿದ್ಧ, ಸಮರಕ್ಕೂ ಬದ್ಧ: ಆರೋಪದ ಬಗ್ಗೆ ಮುರುಘಾ ಶ್ರೀ ಮೊದಲ ಮಾತು

ವೈದ್ಯರ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ನಿರ್ಮಲಾ ಸೀತಾರಾಮನ್, ಪೆಟ್ರೋಲಿಯಂ ಸಚಿವಾಲಯಕ್ಕೆ ಈ ಮಾಹಿತಿ ರವಾನಿಸಿ, ಡಾ. ರವಿಕಿರಣ ಅವರಿಗೆ ಹಿಂಬರಹವನ್ನೂ ಕಳಿಸಿಕೊಟ್ಟಿದ್ದರು.

ಈಗ ಇಂಡಿಯನ್ ಆಯಿಲ್ ಕಂಪನಿಯಿಂದ ಡಾ. ಪಟವರ್ಧನ್ ಅವರಿಗೆ ಪ್ರತ್ಯುತ್ತರ ಬಂದಿದ್ದು, ಅದರಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಮಂಗಳೂರಿನಿಂದ ಶಿರಸಿಗೆ ಬರುತ್ತಿದ್ದ ಪೆಟ್ರೋಲ್ ಹಾಗೂ ಡಿಸೇಲ್ ಬದಲಾಗಿ ಹುಬ್ಬಳ್ಳಿಯಿಂದ ಸರಬರಾಜು ಮಾಡಲಾಗುವುದು ಎಂಬ ಮಾಹಿತಿ ನೀಡಿದ್ದಾರೆ. ಆ ಮೂಲಕ ಶಿರಸಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 1.19 ರೂ. ಮತ್ತು ಡೀಸೆಲ್ 1.01 ರೂ. ಗಳಷ್ಟು ಕಡಿಮೆಯಾಗಿದೆ. ಇದನ್ನೂ ಓದಿ: ಪಿಎಸ್‌ಐ ಅಕ್ರಮ- ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದು ನಾಪತ್ತೆಯಾಗಿದ್ದಾಕೆ ಕೊನೆಗೂ ಲಾಕ್

Live Tv

Leave a Reply

Your email address will not be published.

Back to top button