– ಬೆಳಗಾವಿಯಲ್ಲಿ ಖಾಕಿ ಮಿಂಚಿನ ಕಾರ್ಯಾಚರಣೆ; 17,000 ಲೀಟರ್ ಡಿಸೇಲ್ ಜಪ್ತಿ
ಬೆಳಗಾವಿ: ಚಿನ್ನದಂತೆ ಗಲ್ಫ್ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್ ಸ್ಮಗ್ಲಿಂಗ್ (Diesel Smuggling) ಮಾಡ್ತಿದ್ದ ಅಕ್ರಮ ಜಾಲವೊಂದು ಸಿಕ್ಕಿಬಿದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೋಟಿ ಕೋಟಿ ತೆರಿಗೆ ವಂಚಿಸುತ್ತಿದ್ದ ಖದೀಮರು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರ (MalaMaruti Police Station) ಮಿಂಚಿನ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಬೆಳಗಾವಿ ಪೊಲೀಸರು ಅಕ್ರಮ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ (Oil Tanker) ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ:

ಹೌದು. ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಟ್ಯಾಂಕರ್‌ನಲ್ಲಿ ತೈಲ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಾಳಮಾರುತಿನಗರ ಪೊಲೀಸರ ತಂಡ, ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿದೆ. ದಾಳಿ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಪೆಟ್ರೋಲಿಯಂ ಉತ್ಪನ್ನಗಳು ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ. ಕೂಡಲೇ 17 ಲಕ್ಷ ರೂ. ಮೌಲ್ಯದ 17,000 ಲೀಟರ್ ಡೀಸೆಲ್ ಮತ್ತು ಟ್ಯಾಂಕರ್ ಅನ್ನು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಹೇಮಾವತಿ ನದಿ ಮೂಲಕ್ಕೆ ಸಂಚಕಾರ – ಮಣ್ಣು ಮಾಫಿಯಾಕ್ಕೆ ನದಿ ಮೂಲ ಬಲಿಯಾಗುತ್ತಾ?

ಇನ್ನೂ ತುಮಕೂರು ಮೂಲದ ಟ್ಯಾಂಕರ್ ಮಾಲೀಕ ಅರಿಹಂತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಲ್ಫ್ ರಾಷ್ಟ್ರಗಳಿಂದ ಅಕ್ರಮವಾಗಿ ತೈಲ ಸಾಗಾಟ ಮಾಡುತ್ತಿದ್ದದ್ದು ಗೊತ್ತಾಗಿದೆ. ಇದನ್ನೂ ಓದಿ: ಟಾಟಾ ಏಸ್, ಪಿಕಪ್ ಮುಖಾಮುಖಿ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ವಿಚಾರಣೆ ವೇಳೆ ಸ್ಮಗ್ಲಿಂಗ್ ಜಾಲದಲ್ಲಿ ಮಹಾರಾಷ್ಟ್ರ, ರಾಜಸ್ಥಾನದವರು ಇರುವುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಮಗ್ಲರ್‌ಗಳ ಬೆನ್ನುಬಿದ್ದಿದ್ದಾರೆ. ಇದನ್ನೂ ಓದಿ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ನಲ್ಲಿ ಜಿಬಿಎ ಚುನಾವಣೆ – ಡಿಕೆ ಸುರೇಶ್ ಅಪಸ್ವರ

