ನವದೆಹಲಿ: ಎಥೆನಾಲ್ ಘಟಕಗಳು ದೇಶದಲ್ಲಿ ಆರಂಭಗೊಂಡ ನಂತರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಛತ್ತೀಸ್ಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಟ್ಟಾರೆ 5 ಎಥೆನಾಲ್ ಉತ್ಪಾದನಾ ಘಟಕಗಳನ್ನು ಕೇಂದ್ರ ಸರ್ಕಾರ ತೆರೆಯಲಿದ್ದು, ಇವುಗಳು ಕಾರ್ಯಾರಂಭ ಮಾಡಿದ ಬಳಿಕ ದೇಶದಲ್ಲಿ ತೈಲ ಬೆಲೆ ಇಳಿಕೆಯಾಗಲಿದೆ ಎಂದರು. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ
- Advertisement 2
ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳಿಂದ ಘಟಕದಲ್ಲಿ ಇಂಧನವನ್ನು ಉತ್ಪತ್ತಿ ಮಾಡಲಾಗುತ್ತದೆ. ಭತ್ತ ಹಾಗೂ ಗೋಧಿಯ ಹುಲ್ಲು, ಕಬ್ಬು ಇನ್ನಿತರ ಕೃಷಿಯಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಬಳಸಿ ಇಂಧನ ಉತ್ಪತ್ತಿ ಮಾಡಬಹುದಾಗಿದೆ ಎಂದು ಹೇಳಿದರು. ಇದನ್ನೂ ಓದಿ: 1 ರೂ. ಟಿಕೆಟ್ಗೆ 17 ಕಿ.ಮೀ ಸಂಚಾರ – ಇದು ದನದ ಸೆಗಣಿಯಿಂದ ಓಡೋ ಬಸ್ ವಿಶೇಷತೆ
- Advertisement 3
Our Petroleum Ministry is setting up 5 ethanol-making plants in country. Ethanol will be produced from wood products&segregated municipal waste. Diesel will be available at Rs.50 per litre & petrol alternative at Rs.55 per litre: Union Minister Nitin Gadkari in Durg #Chhattisgarh pic.twitter.com/YXCjRWJCVF
— ANI (@ANI) September 10, 2018
- Advertisement 4
ಎಥೆನಾಲ್, ಮೆಥೆನಾಲ್, ಬಯೋ ಇಂಧನ ಮತ್ತು ಸಿಎನ್ಜಿ ಬಳಕೆ ಹೆಚ್ಚಾದಂತೆ ಪೆಟ್ರೋಲ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಇದರಿಂದಾಗಿ ತೈಲ ಬೆಲೆ ಇಳಿಕೆಯಾಗಲಿದೆ. ಛತ್ತೀಸ್ಗಢದಲ್ಲಿ ತೆರೆಯಲಾದ ಜತ್ರೋಪಾ ಘಟಕದಿಂದ ಉತ್ಪಾದನೆಯಾದ ಜೈವಿಕ ಇಂಧನವನ್ನು ಬಳಸಿ ಇದೇ ಮೊದಲ ಬಾರಿಗೆ ದೇಶದಲ್ಲಿ ವಿಮಾನವನ್ನು ಹಾರಿಸಲಾಗಿದೆ ಎಂದು ಈ ವೇಳೆ ತಿಳಿಸಿದರು. ಇದನ್ನೂ ಓದಿ: 2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ
We import petrol/diesel worth Rs.8 lakh cr,petrol price is increasing,Rs value is falling vs dollar.I've been saying since 15 yrs that farmers&tribals can make biofuel&fly aircraft.Our new technology can run vehicles on ethanol made by farmers&tribals: Nitin Gadkari #Chhattisgarh pic.twitter.com/82haAVzr4R
— ANI (@ANI) September 10, 2018
ನಾವು 8 ಲಕ್ಷ ಕೋಟಿ ರೂ. ಮೌಲ್ಯದ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಆಮದು ಮಾಡಿಕೊಳ್ಳುತ್ತಿದ್ದು, ತೈಲ ಬೆಲೆ ಮತ್ತಷ್ಟು ಏರಿಕೆಯಾಗುತ್ತಿದೆ. ಇದರಿಂದಾಗಿ ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿದೆ. ರೈತರು, ಆದಿವಾಸಿಗಳ ಸಹಾಯದಿಂದ ಎಥೆನಾಲ್, ಮೆಥೆನಾಲ್, ಬಯೋ- ಇಂಧನವನ್ನು ತಯಾರಿಸಬಹುದು. ಇವುಗಳನ್ನು ವಿಮಾನ ಹಾರಾಟಕ್ಕೂ ಬಳಸಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!
ಕಳೆದ ಸೋಮವಾರ ಜೈವಿನ ಇಂಧನ ಬಳಸಿದ್ದ ಸ್ಪೈಸ್ ಜೆಟ್ ವಿಮಾನ ಡೆಹ್ರಾಡೂನ್ನಿಂದ ಹೊರಟು ದೆಹಲಿಗೆ ಬಂದಿಳಿದಿತ್ತು. ಈ ವಿಮಾನದಲ್ಲಿ ಶೇ. 75 ಜೆಟ್ ಇಂಧನ ಹಾಗೂ ಶೇ. 25 ಜೈವಿಕ ಇಂಧನ ಬಳಸಲಾಗಿತ್ತು. ಸ್ಪೈಸ್ ಜೆಟ್ನ ಬೊಂಬಾರ್ಡಿಯರ್ ಕ್ಯೂ400 ವಿಮಾನವನ್ನು ಈ ಪ್ರಯೋಗಕ್ಕೆ ಬಳಸಲಾಗಿತ್ತು. ಪ್ರಸ್ತುತ ಅಮೆರಿಕ ಮತ್ತು ಆಸ್ಟ್ರೇಲಿಯಾದಲ್ಲಿ ವಿಮಾನಗಳು ಜೈವಿಕ ಇಂಧನವನ್ನು ಬಳಸುತ್ತಿವೆ. ಇದನ್ನೂ ಓದಿ: ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಸರ್ಕಾರಗಳ ನಿಲುವು ಏನು?
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv