CinemaKarnatakaLatestSandalwood

ದಾಂಪತ್ಯ ಜೀವನಕ್ಕೆ ಎಂಟ್ರಿ ಕೊಟ್ಟ ದಿಗಂತ್- ಐಂದ್ರಿತಾ ರೇ

ಚಿಕ್ಕಬಳ್ಳಾಪುರ: ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ದೂದ್‍ಪೇಡ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಅವರ ಮದುವೆ ಫೋಟೋ ರಿವೀಲ್ ಆಗಿದೆ.

ಚಿಕ್ಕಬಳ್ಳಾಪುರದ ನಂದಿಬೆಟ್ಟದ ಸಮೀಪವಿರುವ ಡಿಸ್ಕವರಿ ವಿಲೇಜ್ ರೆಸಾರ್ಟ್‍ನಲ್ಲಿ ಬುಧವಾರ ಸಂಜೆ 6.30ಕ್ಕೆ ದಿಗಂತ್ ಹಾಗೂ ಐಂದ್ರಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಾಳಿ ಸಂಪ್ರದಾಯದಲ್ಲಿ ದಿಗಂತ್ ಹಾಗೂ ಐಂದ್ರಿತಾ ಮಿಂಚಿದ್ದಾರೆ.

ದಿಗಂತ್ ಹಾಗೂ ಐಂದ್ರಿತಾ ರೇ ಮದುವೆ ಬೆಂಗಾಳಿ ಸಂಪ್ರದಾಯದಲ್ಲಿ ನಡೆದಿದೆ. ಇವರಿಬ್ಬರ ಮದುವೆ ಸಮಾರಂಭಕ್ಕೆ ನಟಿ ರಾಗಿಣಿ ದ್ವಿವೇದಿ, ಶರ್ಮಿಳಾ ಮಾಂಡ್ರೆ ಸೇರಿದಂತೆ ಇನ್ನಿತರ ಕಲಾವಿದರು, ಸ್ನೇಹಿತರು ಹಾಗೂ ಕುಟುಂಬದವರು ಭಾಗಿಯಾಗಿದ್ದರು.

ದಾಂಪತ್ಯ ಜೀವನಕ್ಕೆ ಎಂಟ್ರಿ ಕೊಟ್ಟ ದಿಗಂತ್- ಐಂದ್ರಿತಾ ರೇ

ದಿಗಂತ್ ಹಾಗೂ ಐಂದ್ರಿತಾ ರೇ ಮನಸಾರೆ ಇಷ್ಟಪಟ್ಟು ಬರೋಬ್ಬರಿ 8 ವರ್ಷವಾಗಿದ್ದು, ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಂದಿಬೆಟ್ಟದ ತಪ್ಪಲಲ್ಲಿರುವ ಡಿಸ್ಕವರಿ ವಿಲೇಜ್‍ನಲ್ಲಿ ಮಂಗಳವಾರ ಅರಿಶಿಣ ಶಾಸ್ತ್ರ ನೆರವೇರಿತ್ತು. ಐಂದ್ರಿತಾ ಅವರ ಮನೆಯಂಗಳದಲ್ಲೇ ಬೆಳೆದಿರುವ ಅರಿಶಿನದಿಂದ ಮದ್ವೆ ಶಾಸ್ತ್ರ ಮಾಡಿಸಿಕೊಂಡು ಸಂಭ್ರಮಿಸಿದ್ದಾರೆ.

ಡಿ. 15ರಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್‍ವುಡ್ ಹಲವು ನಟ- ನಟಿಯರು ಭಾಗಿಯಾಗಿ ನವಜೋಡಿಯನ್ನು ಶುಭ ಕೋರಲಿದ್ದಾರೆ. ಶೇರ್ ಚಾಟ್ ಸಂಸ್ಥೆ ಐಂದ್ರಿತಾ, ದಿಗಂತ್ ಜೋಡಿಯ ಮದುವೆಯ ಫೋಟೋ ಮತ್ತು ವಿಡಿಯೋಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Related Articles

Leave a Reply

Your email address will not be published. Required fields are marked *