ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯ ಡಿಜಿಟಲ್ ಇಂಡಿಯಾ ಕನಸಿನ ಭಾರತ ನನಸು ಮಾಡಲು ಪ್ರತಿ ಮನೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ಚಿಕ್ಕಪೇಟೆ ಶಾಸಕರಾದ ಉದಯ್ ಗರುಡಾಚಾರ್ ಅಭಿಪ್ರಾಯಪಟ್ಟಿದ್ದಾರೆ.
Advertisement
ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಆನಾಥ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಕ್ಟ್ ವರ್ಕ್ ಮಾಡಲು ಅನುಕೂಲಕ್ಕೆ ಬಿಗ್-ಬಿ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಆನಾಥ ಮಕ್ಕಳು ಕಾಲೇಜು ,ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಕ್ಟ್ ವರ್ಕ್ ಮಾಡಲು ತರಬೇತಿ ಕೇಂದ್ರ ಉದ್ಘಾಟನೆಯನ್ನು ಉದಯ್ ಗರುಡಾಚಾರ್, ಅರಣ್ಯ ಅಭಿವೃದ್ದಿ ನಿಗಮ ನಿರ್ದೇಶಕಿ ಭಾಗ್ಯವತಿ ಅಮರೇಶ್, ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಮರೇಶ್ (ಅಂಬರೀಶ್) ಮತ್ತು ಚಲನಚಿತ್ರ ನಿರ್ಮಾಪಕ ಜಾಕ್ ಮಂಜು ಉದ್ಘಾಟನೆ ಮಾಡಿದರು. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‍ನಲ್ಲಿ ಮತ್ತೆ ಬಿರುಕು – ಚರಣ್‍ಜಿತ್ ಸಿಂಗ್ ಛನ್ನಿ Vs ಸಿಧು
Advertisement
Advertisement
ಬಳಿಕ ಮಾತನಾಡಿದ ಉದಯ್ ಗರುಡಾಚಾರ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಸ್ಲಂ ಪ್ರದೇಶವಿದೆ. ಅಲ್ಲಿ ಪ್ರತಿಭಾವಂತ ಮಕ್ಕಳು ಇದ್ದಾರೆ ಅವರಿಗೆ ಉತ್ತಮ ಕಂಪ್ಯೂಟರ್ ತಂತ್ರಜ್ಞಾನ ಹೊಂದಲು ಮತ್ತು ಶಾಲಾ, ಕಾಲೇಜು ಮಕ್ಕಳ ಪ್ರಾಜೆಕ್ಟ್ ವರ್ಕ್ ಮಾಡಲು ಉಚಿತವಾಗಿ ಕಲಿಸುವುದರಿಂದ ಶ್ರೀಮಂತರ ಮಕ್ಕಳಿಗೆ ಸಿಗುವ ಕಂಪ್ಯೂಟರ್ ಶಿಕ್ಷಣ ಸ್ಲಂ ಪ್ರದೇಶದ ಮಕ್ಕಳಿಗೆ ಸಿಕ್ಕರೆ ಭಾರತ ಭವಿಷ್ಯ ಉಜ್ವಲವಾಗಲಿದೆ .ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾ ಯಶ್ವಸಿಯಾಗಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹೇಳಿದರು. ಇದನ್ನೂ ಓದಿ: ಪುನೀತ್ ಅಂತ್ಯಸಂಸ್ಕಾರಕ್ಕೆ ಶ್ರಮಿಸಿದ ಎಲ್ಲರಿಗೂ ಅಶ್ವಿನಿ ಧನ್ಯವಾದ
Advertisement
ಭಾಗ್ಯವತಿ ಅಮರೇಶ್ ಮಾತನಾಡಿ, ಶಿಕ್ಷಣದಿಂದ ದೇಶ ಅಭಿವೃದ್ದಿ ಸಾಧ್ಯ. ಆರ್ಥಿಕವಾಗಿ ಸಬಲರಾದವರಿಗೆ ಉನ್ನತ ಶಿಕ್ಷಣ ಸಿಗುತ್ತದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಉಚಿತವಾಗಿ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಕ್ಟ್ ವರ್ಕ್ ಮಾಡಲು 10 ಕಂಪ್ಯೂಟರ್ ಗಳನ್ನು ಅಳವಡಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಆಶಯ ನಮ್ಮದು ಎಂದು ಹೇಳಿದರು. ಇದನ್ನೂ ಓದಿ: ನಾನು ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್
ಕಾರ್ಯಕ್ರಮದಲ್ಲಿ ಬಿ.ಜೆ.ಪಿ.ಪ್ರಮುಖ ಮುಖಂಡರು, ಸ್ಲಂ ಪ್ರದೇಶದ ಮಕ್ಕಳು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.