ಚಾಮರಾಜನಗರ: 1 ರಿಂದ 12 ನೇ ತರಗತಿ ವರೆಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯ ಕೊಳ್ಳೇಗಾಲದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆಯಾಗಿದೆ.
ಸಾರ್ವಜನಿಕ ಗ್ರಂಥಾಲಯ ಹಾಗೂ ಕೇರಳದ ಸಾಯಿ ಸಂಜೀವಿನಿ ಚಾರಿಟೇಬಲ್ ಸಹಯೋಗದಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಕೊಳ್ಳೇಗಾಲ ನಗರದಲ್ಲಿ ನಿರ್ಮಿಸಲಾಗಿತ್ತು. ಇಂದು ಶಿಕ್ಷಣ ಸಚಿವ ಎನ್ ಮಹೇಶ್ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.
ಡಿಜಿಟಲ್ ಗ್ರಂಥಾಲಯದಲ್ಲಿ 1 ರಿಂದ 12ನೇ ತರಗತಿವರೆಗಿನ ಎಲ್ಲಾ ರೀತಿಯ ಪಠ್ಯ ಪುಸ್ತಕಗಳನ್ನು ಸಂಗ್ರಹಿಸಲಾಗಿದೆ. ಇದಲ್ಲದೇ ಕೆಎಎಸ್ ಮತ್ತು ಐಎಎಸ್ ಸೇರಿದಂತೆ ವಿವಿಧ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ಭಂಡಾರ ಹಾಗೂ ನೂರಕ್ಕೂ ಹೆಚ್ಚು ಅಂತರಾಷ್ಟ್ರೀಯ ನಿಯತಕಾಲಿಕೆಗಳನ್ನು ಒಳಗೊಂಡಿದೆ.
ಬೆರಳ ತುದಿಯಲ್ಲಿಯೇ ಎಲ್ಲಾ ರೀತಿಯ ಮಾಹಿತಿಗಳನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಡಿಜಿಟಲ್ ಗ್ರಂಥಾಲಯದಲ್ಲಿ ಪಡೆದುಕೊಳ್ಳಬಹುದಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv