ಭೋಪಾಲ್: ಕಾಂಗ್ರೆಸ್ (Congress) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ (Digvijaya Singh) ಕೆಳಗೆ ಬಿದ್ದಿದ್ದಾರೆ. ಇನ್ನೂ ಈ ಘಟನೆಗೆ ಕಾರಣ ಬಿಜೆಪಿ (BJP) ಎಂದು ಕಾಂಗ್ರೆಸ್ ಆರೋಪಿಸಿದೆ.
Advertisement
ಹೌದು, ಭಾರತ್ ಜೋಡೋ ಪಾದಯಾತ್ರೆ ನಡುವೆ ಚಹಾ ವಿರಾಮಕ್ಕೆಂದು ರಸ್ತೆಬದಿಯ ರೆಸ್ಟೋರೆಂಟ್‍ಗೆ ಚಲಿಸುತ್ತಿದ್ದಾಗ ದಿಗ್ವಿಜಯ್ ಸಿಂಗ್ ಅವರು ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಈ ವೇಳೆ ತಕ್ಷಣವೇ ಕಾಂಗ್ರೆಸ್ ಕಾರ್ಯಕರ್ತರು ದಿಗ್ವಿಜಯ್ ಸಿಂಗ್ ಅವರ ಕೈ ಹಿಡಿದು ಮೇಲಕ್ಕೆತ್ತಿ ಸಹಾಯ ಮಾಡಿದ್ದಾರೆ.
Advertisement
Advertisement
ಭಾರತ್ ಜೋಡೋ ಯಾತ್ರೆಯಲ್ಲಿ ಇಲ್ಲಿಯವರೆಗೂ ದಿಗ್ವಿಜಯ್ ಸಿಂಗ್ ಅವರು ನಾಲ್ಕು ಬಾರಿ ಕೆಳಗೆ ಬಿದ್ದಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಮಧ್ಯಪ್ರದೇಶದಲ್ಲಿ (Madhya Pradesh) ಬಿದ್ದಿದ್ದಾರೆ. ಇದಕ್ಕೆ ಕಾರಣ ರಾಜ್ಯದಲ್ಲಿ ಹದಗೆಟ್ಟಿ ಹೋಗಿರುವ ರಸ್ತೆಗಳು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಉಸ್ತುವಾರಿ ಜೈರಾಮ್ ರಮೇಶ್ (Jairam Ramesh) ಆರೋಪಿಸಿದ್ದಾರೆ. ಇದನ್ನೂ ಓದಿ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್‌ನಲ್ಲಿ ಡೀಸೆಲ್ ಖಾಲಿ – ದಾರಿ ಮಧ್ಯೆ ಅಸುನೀಗಿದ ಬಡ ಜೀವ
Advertisement
अरे ये कैसा अनुशासन…?
यात्रा में धक्का मुक्की से वरिष्ठ नेता गिर रहे है…
चलो हटो यहाँ से… pic.twitter.com/mazFezGR1Q
— Narendra Saluja (@NarendraSaluja) November 26, 2022
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರ ಹಳೆಯ ಹೇಳಿಕೆಯನ್ನು ಉಲ್ಲೇಖಿಸಿ, ಅಮೆರಿಕದ ವಾಷಿಂಗ್ಟನ್ ರಸ್ತೆಗಳಿಗಿಂತ ಸಂಸದರು ನಿರ್ಮಾಣ ಮಾಡಿರುವ ರಸ್ತೆಗಳು ಉತ್ತಮವಾಗಿವೆ ಎಂದು ಹೇಳುತ್ತಾರೆ. ಆದರೆ ಮಧ್ಯಪ್ರದೇಶದ ರಸ್ತೆಗಳು ಕೊಲೆಗಡುಕ ರಸ್ತೆಗಳು ಮತ್ತು ವಾಷಿಂಗ್ಟನ್‍ನಲ್ಲಿರುವ ರಸ್ತೆಗಳಷ್ಟು ಉತ್ತಮವಾಗಿಲ್ಲ. ಈ ಕೆಟ್ಟ ರಸ್ತೆಗಳಿಂದ ಬೀಳುತ್ತಿದ್ದ ನನ್ನನ್ನು ಮೂರು ಬಾರಿ ರಕ್ಷಿಸಿಕೊಂಡಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಘಟನೆಯ ವೀಡಿಯೋಗೆ ಪ್ರತಿಯಾಗಿ ಟ್ವೀಟ್ ಮಾಡಿರುವ ಬಿಜೆಪಿ ನಾಯಕ ನರೇಂದ್ರ ಸಲೂಜಾ (Narendra Saluja) ಅವರು, ರಸ್ತೆಯ ಸ್ಥಿತಿಗಿಂತ ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರ ನೂಕುನುಗ್ಗಲಿನಿಂದ ದಿಗ್ವಿಜಯ್ ಸಿಂಗ್ ಕೆಳಗೆ ಬಿದ್ದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಕಮಲ ಅರಳಿಸಲು ಪ್ಲಾನ್ – ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ