ನವದೆಹಲಿ: ಎಐಸಿಸಿ (AICC) ಅಧ್ಯಕ್ಷ ಸ್ಥಾನಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ (Congress) ಹಿರಿಯ ನಾಯಕ ದಿಗ್ವಿಜಯ್ ಸಿಂಗ್ (Digvijaya Singh) ಸ್ಪರ್ಧೆ ಮಾಡಲಿದ್ದಾರೆ. ಇಂದು ಎಐಸಿಸಿ ಕಚೇರಿಗೆ ಭೇಟಿ ನೀಡಿದ ಅವರು ನಾಮಪತ್ರ ಪಡೆದಿದ್ದು, ನಾಳೆ ಅವರು ಅದನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಲಿದ್ದಾರೆ.
ಕೇರಳದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿದ್ದ ದಿಗ್ವಿಜಯ್ ಸಿಂಗ್‌ಗೆ ಸೋನಿಯಾ ಗಾಂಧಿ (Sonia Gandhi) ಬುಲಾವ್ ನೀಡಿದ್ದರು. ರಾಜಸ್ಥಾನ ಸಂಘರ್ಷದ ಬಳಿಕ ಸೋನಿಯಾ ಗಾಂಧಿ ಅವರು ದಿಗ್ವಿಜಯ್ ಸಿಂಗ್ ಕರೆಸಿಕೊಂಡು ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಸೂಚನೆ ನೀಡಿದ್ದರು.
Advertisement
Advertisement
ಸೋನಿಯಾ ಗಾಂಧಿ ಸೂಚನೆ ಮೇರೆಗೆ ಇಂದು ನಾಮಪತ್ರ ಪಡೆದಿರುವ ಅವರು ನಾಳೆ ಸಲ್ಲಿಕೆ ಮಾಡಲಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಮಧ್ಯಪ್ರದೇಶದ 10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ದಿಗ್ವಿಜಯ್ ಸಿಂಗ್ ನಾಮಪತ್ರ ಸಲ್ಲಿಸುವ ವೇಳೆ ಸಾಥ್ ನೀಡಲಿದ್ದಾರೆ.
Advertisement
Advertisement
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ (Rajasthan) ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಸ್ಪರ್ಧಿಸಬೇಕಿತ್ತು. ಆದರೆ ರಾಜಸ್ಥಾನದಲ್ಲಿ ಸಿಎಂ ಸ್ಥಾನಕ್ಕಾಗಿ ಶುರುವಾದ ಭಿನ್ನಮತದ ಹಿನ್ನಲೆ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಚುನಾವಣೆ ಸ್ಪರ್ಧಿಸುವುದಾಗಿ ಹೇಳಿದ್ದ ಮತ್ತೋರ್ವ ನಾಯಕ ಶಶಿ ತರೂರ್ ಈವರೆಗೂ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿಲ್ಲ.