ರೊಮ್ಯಾಂಟಿಕ್ ಕಾಮಿಡಿ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ “ದಿಲ್ ಖುಷ್” (Dil Khush) ಚಿತ್ರದ ಮೂರನೇ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಇದು ಕೊನೆಯ ಹಂತದ ಚಿತ್ರೀಕರಣ ಸಹ. ದ್ವಿತೀಯ ಹಂತದ ಚಿತ್ರೀಕರಣ ಕೊಡಗಿನ (Kodagu) ಸೋಮವಾರಪೇಟೆ ಹಾಗೂ ಶನಿವಾರಸಂತೆಯಲ್ಲಿ ಒಂಭತ್ತು ದಿನಗಳ ಕಾಲ ನಡೆದಿದೆ, ಈ ಹಂತದಲ್ಲಿ ಮಾತಿನ ಭಾಗ ಹಾಗೂ ಒಂದು ಸಾಹಸ ಸನ್ನಿವೇಶದ ಚಿತ್ರೀಕರಣವಾಗಿದೆ. ಅಶೋಕ್ ಅವರು ಸಂಯೋಜಿಸಿರುವ ಈ ಸಾಹಸ ಸನ್ನಿವೇಶ ಕೆಸರುಗದ್ದೆಯಲ್ಲಿ ಚಿತ್ರೀಕರಣಗೊಂಡಿದ್ದು, ಸಾಹಸಪ್ರಿಯರಿಗೆ ಮೆಚ್ಚುಗೆಯಾಗಲಿದೆ.
ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸುತ್ತಿರುವ “ದಿಲ್ ಖುಷ್” ಚಿತ್ರವನ್ನು ಪ್ರಮೋದ್ ಜಯ (Pramod Jaya) ನಿರ್ದೇಶಿಸುತ್ತಿದ್ದಾರೆ, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಐದು ಸುಮಧುರ ಹಾಡುಗಳಿದ್ದು, ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ. ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ
ರಂಜಿತ್ (Ranjith) ಮೊದಲ ಬಾರಿಗೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸ್ಪಂದನ ಸೋಮಣ್ಣ “ದಿಲ್ ಖುಷ್ ” ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.