ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟದ ಗೊಂದಲ ಇಂದಿಗೆ ತೆರೆ ಬೀಳಲಿದ್ದು, ಕೊನೆಗೂ ಅಳೆದು ತೂಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 15 ಮಂದಿಯ ಪಟ್ಟಿ ಸಿದ್ಧಪಡಿಸಿದ್ದಾರೆ.
ಸಂಪುಟ ವಿಸ್ತರಣೆ ಬೆನ್ನಲ್ಲೇ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಪ್ಲಾನ್ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ನಿರಾಸೆಯಾಗಿದೆಯಂತೆ. ಮಂಗಳವಾರ ರಾಹುಲ್ ಗಾಂಧಿ ಸಮ್ಮುಖದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಡಿಸಿಎಂ ಆಗಿರುವ ಪರಮೇಶ್ವರನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ನಿರ್ಧಾರ ಮಾಡಿದೆ.
Advertisement
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದ್ದು, ಶಾಸಕ ದಿನೇಶ್ ಗುಂಡೂರಾವ್ ಗೆ ಸಚಿವ ಸ್ಥಾನದ ಬದಲಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಚಿಂತನೆ ನಡೆಸಿದೆ. ಸದ್ಯ ಕೆಪಿಸಿಸಿ ಕಾರ್ಯಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ. ಶೀಘ್ರದಲ್ಲೇ ನಿರ್ಣಯ ಹೊರ ಬೀಳುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.
Advertisement
ಇಂಧನ ಖಾತೆ ಭಿಕ್ಕಟ್ಟು ಬಹುತೇಕ ಇತ್ಯರ್ಥವಾಗಿದ್ದು, ಜೆಡಿಎಸ್ ನಿಂದ ಇಂಧನ ಖಾತೆ ಪಡೆದು ಬೆಂಗಳೂರು ಅಭಿವೃದ್ಧಿ ಖಾತೆ ಬಿಟ್ಟುಕೊಡಲು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನವಾಗಿದೆ.
Advertisement
ಕಾಂಗ್ರೆಸ್ ಗೆ ಇಂಧನ ಖಾತೆ ಬಿಟ್ಟುಕೊಡಲು ಜೆಡಿಎಸ್ ನಿರ್ಧರಿಸಿದ್ದು, ಈ ಹಿಂದೆ ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿದ್ದ ಕೆಜೆ ಜಾರ್ಜ್ ಗೆ ಬೃಹತ್ ಕೈಗಾರಿಕೆ ಕೊಟ್ಟು ಸಮಾಧಾನ ಮಾಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದೆ ಎಂದು ತಿಳಿದು ಬಂದಿದೆ.
Advertisement