ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 20 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ, ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?: ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರು ದೇಶಕ್ಕೆ ಮರಳಲಾಗದೆ ನರಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಯವರಿಗೆ ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ. ಮೋದಿಯವರೆ ಚುನಾವಣಾ ದಾಹ ಬಿಡಿ. ಚುನಾವಣೆ ಬರುತ್ತದೆ ಹೋಗುತ್ತದೆ. ಉಕ್ರೇನ್ನಲ್ಲಿರುವ ಭಾರತೀಯರ ರಕ್ಷಣೆಗೆ ಸ್ವಲ್ಪವಾದರೂ ಮನಸ್ಸು ಮಾಡಿ ಎಂದು ಟ್ವೀಟ್ ಮೂಲಕ ಶಾಸಕ ದಿನೇಶ್ ಗುಂಡೂರಾವ್ ಒತ್ತಾಯ ಮಾಡಿದ್ದಾರೆ.
Advertisement
2
ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರು ದೇಶಕ್ಕೆ ಮರಳಲಾಗದೆ ನರಳುತ್ತಿದ್ದಾರೆ.
ಆದರೆ ಪ್ರಧಾನಿ ಮೋದಿಯವರಿಗೆ ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ.
ಮೋದಿಯವರೆ ಚುನಾವಣಾ ದಾಹ ಬಿಡಿ. ಚುನಾವಣೆ ಬರುತ್ತದೆ ಹೋಗುತ್ತದೆ. ಉಕ್ರೇನ್ನಲ್ಲಿರುವ ಭಾರತೀಯರ ರಕ್ಷಣೆಗೆ ಸ್ವಲ್ಪವಾದರೂ ಮನಸ್ಸು ಮಾಡಿ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 25, 2022
ಉಕ್ರೇನ್‍ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 20 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ.ಕೇಂದ್ರ ಸರ್ಕಾರ ಭಾರತೀಯರ ಯೋಗಕ್ಷೇಮದ ಕಾಳಜಿ ವಹಿಸುವ ಬದಲು ನಿಮ್ಮ ರಕ್ಷಣೆ ನಿಮ್ಮ ಜವಾಬ್ದಾರಿ ಎಂಬ ಧೋರಣೆ ಅನುಸರಿಸುತ್ತಿದೆ. ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ವಿದೇಶಾಂಗ ಇಲಾಖೆ ಏನು ಕ್ರಮ ತೆಗೆದುಕೊಂಡಿದೆ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದಾರೆ.
Advertisement
Advertisement
ಉಕ್ರೇನ್ ಹಾಗೂ ರಷ್ಯಾ ಯುದ್ದ ಸಂಘರ್ಷದಿಂದ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಪೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ. ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇಲೆ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಿನ್ನೆ ರಾತ್ರಿಯಿಂದ ನಾವು ಕೆಲಸ ಮಾಡುತ್ತಿದ್ದೇವೆ. 281 ಕನ್ನಡಿಗರ 27 ಜಿಲ್ಲೆಗಳ ವಿದ್ಯಾರ್ಥಿಗಳು ರಿಪೋರ್ಟ್ ಆಗಿದ್ದಾರೆ. ಅವರು ನಮಗೆ ಮಾಹಿತಿ ನೀಡಿದ್ದಾರೆ. ಆ ಮಾಹಿತಿಯನ್ನು ನಾವು ಕೇಂದ್ರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.