ಬೆಂಗಳೂರು: ಸರ್ಕಾರ ಪ್ರಾರಂಭಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ. ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ. ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು
Advertisement
Advertisement
ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ. ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು ಎಂದಿದ್ದಾರೆ.
Advertisement
2
ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು.
ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ.
ಇದು ಕಟು ವಾಸ್ತವ.
ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 17, 2022
Advertisement
ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ
3
ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ.
ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ?
ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 17, 2022
ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ. ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಕಿಡಿಕಾರಿದ್ದಾರೆ.