ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆಯೂ ಆಗಬಹುದು ಇಲ್ಲವೇ ಸರ್ಜರಿಯೂ ಆಗಬಹುದು. ಡಿ. 22ರದು ಎಲ್ಲವೂ ತಿಳಿಯುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉತ್ತರ ಕರ್ನಾಟಕದ ಆಕಾಂಕ್ಷಿಗಳಿಗೆ ಅನ್ಯಾಯವಾಗದಂತೆ ಸಂಪುಟ ವಿಸ್ತರಣೆಯಾಗಲಿದೆ. ಯಾರನ್ನೂ ಸಮಾಧಾನ ಪಡಿಸುವ ಉದ್ದೇಶದಿಂದ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಇಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುವುದು. ಸಚಿವ ಸಂಪುಟ ವಿಸ್ತರಣೆ ಆಗಬಹುದು ಇಲ್ಲವೇ ಸರ್ಜರಿಯೂ ಆಗಬಹುದು. ಅದನ್ನು ಈಗ ಹೇಳುವುದಕ್ಕೆ ಆಗುವುದಿಲ್ಲ ಡಿ.22 ರಂದು ಎಲ್ಲವೂ ಗೊತ್ತಾಗಲಿದೆ ಎಂದು ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದಾರೆ.
Advertisement
Advertisement
ಸದ್ಯ ಸಮ್ಮಿಶ್ರ ಸರ್ಕಾರದಲ್ಲಿ ಕೆಲವರಿಗೆ ಮಂತ್ರಿಗಳಾಗಬೇಕು ಎಂಬ ಆಸೆ ಇದೆ. ಆದರೆ ಎಲ್ಲರೂ ಮಂತ್ರಿಯಾಗುವುದಕ್ಕೆ ಸಾಧ್ಯವಿಲ್ಲ. ಪ್ರಾಂತ್ಯ, ಜಾತಿ ಜನಾಂಗದ ಮೇಲೆ ಪ್ರಾತಿನಿಧ್ಯ ನೀಡಲಾಗುವುದು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ನಾವೆಲ್ಲರೂ ಒಗ್ಗಾಟ್ಟಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಮುಂದಿನ ಚುನಾವಣೆಗೆ ತಯಾರಾಗಲಿದ್ದೇವೆ. ಉತ್ತರ ಕರ್ನಾಟಕದ ಅಭಿವೃದ್ಧಿ ಸರ್ಕಾರದ ಜವಾಬ್ದಾರಿ. ಸಮ್ಮಿಶ್ರ ಸರ್ಕಾರ ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಲಿದೆ ಎಂದರು.
Advertisement
Advertisement
ಶಾಸಕಾಂಗ ಸಭೆಗೆ ಶಾಸಕರು ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಶಾಸಕಾಂಗ ಸಭೆಗಳಲ್ಲಿ ಬಹಳಷ್ಟು ಶಾಸಕರು ಗೈರಾಗಿಲ್ಲ. ಬೇರೆ ಬೇರೆ ಕಾರಣಗಳಿಂದ ಕೆಲವು ಶಾಸಕರು ಹಾಜರಾಗಿಲ್ಲ ಅಷ್ಟೇ ಎಂದು ಅವರು ಸ್ಪಷ್ಟಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv