ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.
ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಪತ್ರ ಬರೆಯುವ ಮೂಲಕ ರಾಹುಲ್ ಗಾಂಧಿ ಅವರಿಗೆ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ದಾರೆ.
Advertisement
ಪತ್ರದಲ್ಲಿ ಏನಿದೆ?
“ನಿಮ್ಮ ಸ್ಪರ್ಧೆಯಿಂದ ಇಡೀ ಕರ್ನಾಟಕಕ್ಕಷ್ಟೇ ಅಲ್ಲ, ಇಡೀ ದಕ್ಷಿಣ ಭಾರತಕ್ಕೆ ಬಲ ಬರಲಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಈ ಸಲ ಗೆಲ್ಲಲಿದೆ. ನಿಮ್ಮ ಸ್ಪರ್ಧೆಗೆ ಸದಾ ಸ್ವಾಗತ. ರಾಜ್ಯ ಕಾಂಗ್ರೆಸ್ ನಿಮ್ಮ ಸ್ಪರ್ಧೆಯ ನಿರೀಕ್ಷೆಯಲ್ಲಿದೆ. ಅಲ್ಲದೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ಸೋನಿಯಾ ಗಾಂಧಿಯ ಅವರನ್ನು ನಮ್ಮ ರಾಜ್ಯದಿಂದ ಲೋಕಸಭೆಗೆ ಗೆಲ್ಲಿಸಿ ಕಳುಹಿಸಿದ್ದೇವೆ” ಎಂದು ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
Advertisement
ಕಳೆದ ವಾರ ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ದಿನೇಶ್, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ, ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ. ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ ಎಂದು ಹೇಳಿ ಆಹ್ವಾನ ನೀಡಿದ್ದರು. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ನಾವು ಆಯ್ಕೆ ಮಾಡಿದ್ದೆವು. ಈಗ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಿ ಪ್ರಧಾನ ಮಂತ್ರಿಯನ್ನಾಗಿ ಮಾಡೋಣ ಎಂದು ಹೇಳಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv