ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟಿಂಗ್ ಕೋಚ್ (Batting Coach) ಮತ್ತು ಮೆಂಟರ್ (Mentor) ಆಗಿ ದಿನೇಶ್ ಕಾರ್ತಿಕ್ (Dinesh Karthik) ಆಯ್ಕೆಯಾಗಿದ್ದಾರೆ.
ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ನಂತರ ದಿನೇಶ್ ಕಾರ್ತಿಕ್ ಹೊಸ ಜವಾಬ್ದಾರಿಯೊಂದಿಗೆ ಆರ್‌ಸಿಬಿಗೆ ರಿಎಂಟ್ರಿಯಾಗಿದ್ದಾರೆ.
Welcome our keeper in every sense, ???????????????????????? ????????????????????????????, back into RCB in an all new avatar. DK will be the ???????????????????????????? ???????????????????? ???????????? ???????????????????????? of RCB Men’s team! ????????
You can take the man out of cricket but not cricket out of the man! ???? Shower him with all the… pic.twitter.com/Cw5IcjhI0v
— Royal Challengers Bengaluru (@RCBTweets) July 1, 2024
ದಿನೇಶ್ ಕಾರ್ತಿಕ್ ಹೊಸ ಅವತಾರದಲ್ಲಿ ಆರ್‌ಸಿಬಿ ಮರಳಿದ್ದಾರೆ. ಡಿಕೆ ಆರ್‌ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಆರ್‌ಸಿಬಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ. ಇದನ್ನೂ ಓದಿ: ವಿಶ್ವಕಪ್ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?
ವಿಕೆಟ್‌ಕೀಪರ್ ಬ್ಯಾಟರ್ ಆಗಿರುವ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ (IPL) 257 ಪಂದ್ಯಗಳನ್ನು ಆಡಿದ್ದಾರೆ. 26.32 ಸರಾಸರಿಯಲ್ಲಿ 22 ಅರ್ಧಶತಕಗಳೊಂದಿಗೆ 4,842 ರನ್ ಗಳಿಸಿದ್ದಾರೆ. ಕಾರ್ತಿಕ್ ಆರ್‌ಸಿಬಿ ಹೊರತಾಗಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಡೇರ್‌ಡೆವಿಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದರು.
ಅಹಮದಾಬಾದ್ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲನುಭವಿಸಿದ ಬೆನ್ನಲ್ಲೇ ಆರ್‌ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್‌ಗೆ ನಿವೃತ್ತಿ ಹೇಳಿದ್ದರು.
ಐಪಿಎಲ್‌ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. 2019 ರಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದ ಇವರು 97 ರನ್(50 ಎಸೆತ,7 ಬೌಂಡರಿ, 9 ಸಿಕ್ಸ್ ) ಸಿಡಿಸಿದ್ದರು. ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಡಿಕೆ ಹೆಸರಿನಲ್ಲಿದೆ.