ಮುಂಬೈ: ಕೇಂದ್ರ ಗುತ್ತಿಗೆ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೀಡಿದ್ದ ನೋಟಿಸ್‍ಗೆ ಟೀಂ ಇಂಡಿಯಾ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಉತ್ತರಿಸಿದ್ದು, ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ದಿನೇಶ್ ಕಾರ್ತಿಕ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ನಾಯಕರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ವೆಸ್ಟ್ ಇಂಡೀಸ್‍ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಕೆಕೆಆರ್ ಮಾಲೀಕತ್ವದ ಟ್ರಿನ್ಬಾಗೊ ನೈಟ್ ರೈಡರ್ಸ್ (ಟಿಕೆಆರ್) ತಂಡದ ಡ್ರೆಸಿಂಗ್ ರೂಮ್‍ನಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಅದೇ ಟಿಕೆಆರ್ ತಂಡದ ಜೆರ್ಸಿ ಧರಿಸಿದ್ದರು. ಇದನ್ನು ಗಮನಿಸಿದ್ದ ಬಿಸಿಸಿಐ ಕೇಂದ್ರ ಗುತ್ತಿಗೆ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಶೋಕಾಸ್ ನೋಟಿಸ್ ನೀಡಿತ್ತು. ಜೊತೆಗೆ ಒಂದು ವಾರದೊಳಗೆ ಉತ್ತರ ನೀಡಬೇಕೆಂದು ಸೂಚನೆ ನೀಡಿತ್ತು.
Advertisement
Advertisement
ನೋಟಿಸ್‍ಗೆ ಪ್ರತಿಕ್ರಿಯೆ ನೀಡಿರುವ ದಿನೇಶ್ ಕಾರ್ತಿಕ್ ತಮ್ಮಿಂದಾದ ತಪ್ಪಿಗೆ ನಾಲ್ಕು ಕಾರಣಗಳನ್ನು ನೀಡಿ ಬಿಸಿಸಿಐ ಕ್ಷಮೆಯಾಚಿಸಿದ್ದಾರೆ. ಟಿಕೆಆರ್ ನ ಕೋಚ್ ಬ್ರೆಂಡನ್ ಮೆಕಲಮ್ ಮನವಿ ಮೇರೆಗೆ ಪಂದ್ಯ ವೀಕ್ಷಿಸಲು ತೆರಳಿದ್ದೆ. ಜೊತೆಗೆ ಅವರು ಕೆಕೆಆರ್‍ನ ನೂತನ ಕೋಚ್ ನ್ಯೂಜಿಲೆಂಡ್ ಮಾಜಿ ನಾಯಕ ಹೇಳಿದ್ದರಿಂದ ಟಿಕೆಆರ್ ಜೆರ್ಸಿ ಧರಿಸಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಬಿಸಿಸಿಐ ಅನುಮತಿ ಪಡೆಯದೇ ಕೆರಿಬಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಬೇಶರತ್ ಕ್ಷಮೆಯಾಚಿಸುತ್ತೇನೆ. ನಾನು ಟಿಕೆಆರ್ ತಂಡದ ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಂಡಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತನೆ. ಅಷ್ಟೇ ಅಲ್ಲದೆ ಟಿಕೆಆರ್ ತಂಡದ ಉಳಿದ ಯಾವುದೇ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ದಿನೇಶ್ ಕಾರ್ತಿಕ್, ಕ್ಷಮಾಪಣ ಪತ್ರದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.