ತುಮಕೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಹೋಟೆಲ್‍ನಿಂದ ತಿಂಡಿ ತರಿಸಿ ದಲಿತರ ಮನೆಯಲ್ಲಿ ತಿಂದು ಎಡವಟ್ಟು ಮಾಡಿಕೊಂಡಿದ್ದ ಬಿಜೆಪಿ ನಾಯಕರು ಈಗ ಮತ್ತೆ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಶುರು ಮಾಡಿಕೊಂಡಿದ್ದಾರೆ.
ಕಳೆದ ಬಾರಿಯಂತೆ ಈ ಬಾರಿ ಆಗಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟ ಬಿಜೆಪಿ ನಾಯಕರು ದಲಿತರ ಮನೆಯಲ್ಲೇ ಅಡುಗೆ ತಯಾರಿಸಿ ಸಹಪಂಕ್ತಿ ಭೋಜನ ಮಾಡಿದ್ದಾರೆ. ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಪ್ರಯುಕ್ತ ತುಮಕೂರು ಜಿಲ್ಲೆಯಲ್ಲಿ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಇಂದಿನಿಂದ ಆರಂಭವಾಗಿದೆ. ಇದನ್ನೂ ಓದಿ: ಮಹಿಳಾ ದಿನಾಚರಣೆ – ಪತ್ನಿ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದ ಶಾಸಕ
ತುಮಕೂರು ನಗರ ಜೈಪುರದ ದಲಿತ ಮುಖಂಡ ನವೀನ್ ಎನ್ನುವವರ ಮನೆಯಲ್ಲಿ ಬಿಜೆಪಿ ಮುಖಂಡರು ಸಹಪಂಕ್ತಿ ಭೋಜನ ಮಾಡಿದ್ದಾರೆ. ನಗರ ಶಾಸಕ ಜ್ಯೋತಿಗಣೇಶ್, ಜಿಲ್ಲಾಧ್ಯಕ್ಷ ಲಕ್ಷ್ಮೀಶ್, ಮುಖಂಡರಾದ ಓಂಕಾರ್ ಸೇರಿ ಹಲವು ಪ್ರಮುಖರು ನವೀನ್ ಕುಟುಂಬದ ಜೊತೆ ಕುಳಿತು ಊಟ ಮಾಡಿದ್ದಾರೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಇದನ್ನೂ ಓದಿ: ಮೂರು ವರ್ಷದ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಂದೆ