ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸಿಎಂ ತವರು ಜಿಲ್ಲೆಗೆ ಭೇಟಿ ನೀಡಿ, ಸ್ಥಳೀಯ ಶಾಸಕರು ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
Advertisement
ಮಂಗಳವಾರ ಮೈಸೂರಿಗೆ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನೆಯಲ್ಲಿ ʻಅಹಿಂದʼ ನಾಯಕರ ಡಿನ್ನರ್ ಮೀಟಿಂಗ್‌ನಲ್ಲೂ ಭಾಗಿಯಾಗಿದ್ದಾರೆ. ಡಿನ್ನರ್ ಸಭೆಯಲ್ಲಿ ಸಚಿವತ್ರಯರಾದ ಡಾ.ಹೆಚ್.ಸಿ ಮಹದೇವಪ್ಪ (HC Mahadevappa), ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದಾರೆ. ಮೂವರು ಹಿರಿಯ ಸಚಿವರು ಡಿನ್ನರ್ ನೆಪದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ‘ಕಾಂತಾರ’ ಚಿತ್ರದ ಪ್ರತಿ ಹಂತವು ವಿಶೇಷವಾಗಿತ್ತು – ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ
Advertisement
Advertisement
ಈ ಸಭೆಗಾಗಿಯೆ ಇಡೀ ದಿನ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಉಳಿದಿದ್ದರು. ಯಾವುದೇ ಅಧಿಕೃತ ಕಾರ್ಯಕ್ರಮ ಇರದಿದ್ದರೂ ಇಡೀ ದಿನ ಮೈಸೂರಿನಲ್ಲಿ ಇದ್ದು ರಾತ್ರಿ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರದಲ್ಲಿ ಇದೀಗ ಡಿನ್ನರ್ ಮೀಟಿಂಗ್ ಸಹ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಬಿಜೆಪಿಗೆ ಸತತ 3ನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ಇತಿಹಾಸ ಬರೆದಿದೆ: ಮೋದಿ ಸೆಲ್ಯೂಟ್
Advertisement
ಜಾರಕಿಹೊಳಿ ಭೇಟಿಯಾಗಿದ್ದ ವಿಜಯೇಂದ್ರ:
ಸೋಮವಾರವಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು.