ಬೆಂಗಳೂರು: ಗೃಹ ಸಚಿವ ಪರಮೇಶ್ವರ್ (Dr. G Parameshwar) ಅವರ ಸದಾಶಿವನಗರ ನಿವಾಸದಲ್ಲಿ ಭೋಜನ ಕೂಟ (Dnner Party) ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಡಿನ್ನರ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.
ಈ ಭೇಟಿಯಲ್ಲಿ ನಿಗಮ ಮಂಡಳಿ ನೇಮಕದ ಬಗ್ಗೆ ನೂತನ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಉಭಯ ನಾಯಕರ ಮಧ್ಯೆ ಸಾಕಷ್ಟು ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಎಂ ಅವರು ಪರಮೇಶ್ವರ್ ರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ.
8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿ ಆಗಿದ್ದ ಪರಮೇಶ್ವರ್ ಅವರನ್ನು ಈ ಹಿಂದೆ 2013 ರಲ್ಲಿ ಕೊರಟಗೆರೆಯಲ್ಲಿ ಸೋಲಿಸಿದ ಅಪವಾದವನ್ನು ಸಿದ್ದರಾಮಯ್ಯ (Siddaramaiah) ಹೊತ್ತಿದ್ದರು. ಹೀಗಾಗಿ ಸದ್ಯ ಈ ಮೂಲಕ ಪರಮೇಶ್ವರ್ ಅವರನ್ನ ವಿಶ್ವಾಸಕ್ಕೆ ತಗೆದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಚರ್ಚೆ ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. ಒಟ್ಟಿನಲ್ಲಿ ಪರಮೇಶ್ವರ್ ಸಿದ್ದರಾಮಯ್ಯ ಸ್ನೇಹ ಮುಂದಿನ ದಿನಗಳಲ್ಲಿ ಕಾಂಗ್ರೆಸ್‍ನ ಸಾಕಷ್ಟು ಆಂತರಿಕ ಬೆಳವಣಿಗೆಗಳಿಗೆ ಕಾರಣವಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.
ಭೇಟಿ ಬಳಿಕ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಸಿಎಂ ಅವರು ನಮ್ಮ ಮನೆಗೆ ಬಂದಿದ್ರು. ನಾನು ಸತೀಶ್, ಮಹಾದೇವಪ್ಪನವರು ಊಟಕ್ಕೆ ಸೇರಿದ್ವಿ. ಊಟ ಮಾಡಿದ್ವಿ ಅಷ್ಟೇ ಬೇರೆ ಏನೂ ಚರ್ಚೆಯಾಗಿಲ್ಲ. ನಿಗಮ ಮಂಡಳಿಯ ಬಗ್ಗೆ ಇಲ್ಲಿ ಚರ್ಚೆ ಮಾಡೋಕಾಗುತ್ತಾ..?. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: Hombale Films: ನ.4ರಂದು ರಿಲೀಸ್ ಆಗಲಿದೆ ಹುಲಿ ಸಂರಕ್ಷಣೆಯ ಸಾಕ್ಷ್ಯ ಚಿತ್ರ
ಇತ್ತ ಸಚಿವ ಸತೀಶ್ ಜಾರಕಿಹೊಳಿ (Sathish Jarakiholi) ಪ್ರತಿಕ್ರಿಯಿಸಿ, ನಾನು ಸಿಎಂ ಎಲ್ಲಾ ಊಟಕ್ಕೆ ಬಂದಿದ್ವಿ. ನಾವು ಸೇರಿದ ಮೇಲೆ ರಾಜಕೀಯ ಅಲ್ಲದೇ ಬೇರೆ ಏನು ಮಾತಾಡೋದು..?. ಸಣ್ಣಪುಟ್ಟ ರಾಜಕೀಯ ಚರ್ಚೆಯಾಗಿದೆ. ರಾಜಕೀಯ, ರಾಜಕಾರಣ ಎಂದ ಮೇಲೆ ಸಣ್ಣ ಪುಟ್ಟ ಅಸಮಾಧಾನ ಇದ್ದೇ ಇರುತ್ತದೆ. ಮಾತುಕತೆಗಳು ಅಗಾಗ ಅಗ್ತಿರ್ತಾವೆ ಅದು ಬಿಟ್ಟು ಬೇರೆ ಏನೂ ಇಲ್ಲ. ನಿಗಮ ಮಂಡಳಿಯ ನೇಮಕದ ಬಗ್ಗೆ ಚರ್ಚೆಯಾಗಿಲ್ಲ ಅಂದ್ರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]