ಆನೇಕಲ್: ಇಂದು ಮುಂಜಾನೆ ನಾಲ್ವರಿಗೆ ಚಾಕುವಿನಿಂದ ಇರಿದು ಕಾರ್ಮಿಕರ ಬಳಿಯಿದ್ದ ಮೊಬೈಲ್ ಹಾಗೂ ಹಣವನ್ನು ದರೋಡೆ ಮಾಡಿರುವ ಪ್ರಕರಣ ಬೆಂಗಳೂರು ಹೊರವಲಯದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಬಿಲ್ ಪೋರ್ಜ್ ಕಂಪನಿಯ ಕಾರ್ಮಿಕರಾದ ಆಂಧ್ರ ಮೂಲದ ಮಹಾನಂದ, ಉತ್ತರ ಭಾರತ ಮೂಲದ ಪೂರ್ಣಚಂದ್ರ ಹಾಗೂ ಇಬ್ಬರು ಕಾರ್ಮಿಕರ ಮೇಲೆ ಡಿಯೋ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬಳಿಕ ಅವರ ಬಳಿಯಿದ್ದ ಮೊಬೈಲ್ ಹಾಗೂ ಹಣವನ್ನು ದರೋಡೆ ಮಾಡಿದ್ದಾರೆ. ಈ ಘಟನೆಯಲ್ಲಿ ಮಹಾನಂದ ಹಾಗೂ ಪೂರ್ಣ ಚಂದ್ರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯ ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ತೆರಳಿದ್ದಾರೆ.
ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ಡಿಯೋ ಬೈಕ್ ಗ್ಯಾಂಗ್ ಕಳೆದ ಮೂರು ದಿನಗಳಲ್ಲಿ ಇದೇ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 13 ಜನರಿಗೆ ಚಾಕುವಿನಿಂದ ಇರಿದು ದರೋಡೆ ಮಾಡಿವೆ. ಕೈಗಾರಿಕಾ ಪ್ರದೇಶದಲ್ಲಿನ ರಸ್ತೆಗಳಲ್ಲಿ ಸರಿಯಾದ ಬೀದಿ ದೀಪಗಳು ಹಾಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಲ್ಲದಿರುವುದೇ ಈ ಘಟನೆಗಳಿಗೆ ಪ್ರಮುಖ ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv