ಬೆಂಗಳೂರು: ನಿರ್ದೇಶಕ, ನಟ ಎ.ಆರ್. ಬಾಬು ಇಂದು ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಬು ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ನಟ ಮತ್ತು ನಿರ್ದೇಶಕರಾಗಿದ್ದ ಎ.ಆರ್. ಬಾಬು ಚಂದನವನದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಬಾಬು ಅವರಿಗೆ 56 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಬು ಡಯಾಲಿಸಿಸ್ ಗೆ ಒಳಗಾಗುತ್ತಿದ್ದರಂತೆ. ಅನಾರೋಗ್ಯದಿಂದಾಗಿ ತೀವ್ರವಾಗಿ ಬಳಲಿದ್ದ ಬಾಬು ಅವರು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾರೆ.
Advertisement
ಹಲೋ ಯಮ, ಖಳನಾಯಕ, ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ, ಕಾಸಿದ್ದವನೇ ಬಾಸು, ಸಪ್ನೋಂಕಿ ರಾಣಿ, ಚಮ್ಕಾಯಿಸಿ ಚಿಂದಿ ಉಡಾಯಿಸಿ, ಕೂಲಿ ರಾಜ, ಮರುಜನ್ಮ ಸಿನಿಮಾಗಳು ಬಾಬು ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದವು. ಚಂದನವನದ ಹಿರಿಯ ನಿರ್ದೇಶಕರಾಗಿದ್ದ ಬಾಬು ಅವರ ಗರಡಿಯಲ್ಲಿ ಜೋಗಿ ಪ್ರೇಮ್ ಪಳಗಿದ್ದರು. ನಿರ್ದೇಶಕನ ಸಾವಿಗೆ ಸ್ಯಾಂಡಲ್‍ವುಡ್ ಗಣ್ಯರು ಸಂತಾಪ ಸೂಚಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv