ನೈಜ ಘಟನೆ ‘ಕರಳೆ’ ಚಿತ್ರದ ಕಥೆ ಹೇಳೋಕೆ ಬಂದ ‘ಕನ್ನಡ ದೇಶದೊಳ್‌’ ನಿರ್ದೇಶಕ

Public TV
1 Min Read
aviram

‘ಕಲಿವೀರ’, ‘ಕನ್ನಡ ದೇಶದೊಳ್’ ಚಿತ್ರ ಮಾಡಿದ್ದ ನಿರ್ದೇಶಕ ಅವಿರಾಮ್ ಕಂಠೀರವ (Aviram Kanteerava) ಮತೊಮ್ಮೆ ವಿಭಿನ್ನ ಕಥೆ ಹೊಂದಿರುವ ‘ಕರಳೆ’ (Karale) ಚಿತ್ರದ ಕಥೆ ಹೇಳೋಕೆ ಸಜ್ಜಾಗಿದ್ದಾರೆ. ಇದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಈಗಾಗಲೇ ಎರಡು ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಮೂರನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.

aviram 1

ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಚಿತ್ರದ ಪೋಸ್ಟರ್‌ಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ಈ ಚಿತ್ರದಲ್ಲಿ ಸಮಾಜದ ವಾಸ್ತವ ಅಂಶಗಳೊಂದಿಗೆ ಚಿತ್ರೀಕರಿಸಲಾಗುತ್ತಿದೆ. ಎಮೋಷನಲ್, ರಾ, ಮನಕಲಕುವ ದೃಶ್ಯಗಳು ಚಿತ್ರದಲ್ಲಿ ಇರಲಿವೆ. ಚಿಂತಾಮಣಿ, ಮದ್ದೂರು, ಹುಲಿರಾಯನದುರ್ಗ ಸೇರಿ ಹಲವು ಕಡೆ ಶೂಟಿಂಗ್ ನಡೆಸಲಾಗಿದೆ ಎಂದು ನಿರ್ದೇಶಕ ಅವಿರಾಮ್‌ ತಿಳಿಸಿದ್ದಾರೆ. ಇದನ್ನೂ ಓದಿ:2026ರ ಸಂಕ್ರಾಂತಿಯಂದು ರಿಲೀಸ್‌ ಆಗಲಿದೆ ವಿಜಯ್‌ ನಟನೆಯ ಕೊನೆಯ ಸಿನಿಮಾ

karale film

ಈ ಸಿನಿಮಾ ಭಾರತ ಹಾಗೂ ಚೀನಾ ದೇಶಕ್ಕೆ ಸಾಮ್ಯತೆ ಹೊಂದಿರುವ ಕಥೆ ಇದಾಗಿದೆ. ಹೀಗಾಗಿ ಈ ಚಿತ್ರವನ್ನು ಕನ್ನಡ ಹಾಗೂ ಚೈನೀಸ್ ಭಾಷೆಯಲ್ಲಿ ತೆರೆಗೆ ತರಲು ನಿರ್ದೇಶಕ ಅವಿರಾಮ್ ಕಂಠೀರವ ಸಿದ್ಧತೆ ನಡೆಸುತ್ತಿದ್ದಾರೆ. ಎರಡು ದೇಶಗಳಲ್ಲಿ ನಡೆಯುವ ಘಟನೆಗಳಿಗೆ ಸಾಮ್ಯತೆ ಇರುವ ಕಾರಣ ಕನ್ನಡ ಮತ್ತು ಚೈನೀಸ್ ಭಾಷೆಯಲ್ಲಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಇನ್ನೂ ಕನ್ನಡ ಜೊತೆಗೆ ಚೈನೀಸ್ ಭಾಷೆಯಲ್ಲಿ ತಯಾರಾಗುತ್ತಿರುವ ಮೊದಲ ಭಾರತದ ಸಿನಿಮಾ ಎಂಬ ಹೆಗ್ಗಳಿಕೆ ʻಕರಳೆʼ ಚಿತ್ರ ಪಾತ್ರವಾಗಿದೆ.

ಡಾರ್ಕ್ ಶೇಡ್ ನಲ್ಲಿ ಮೇಕಿಂಗ್ ಮಾಡಲಾಗುತ್ತಿದೆ. ಈಗಾಗಲೇ 52 ದಿನಗಳ ಕಾಲ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಇನ್ನೂ 20 ದಿನಗಳ ಶೂಟಿಂಗ್ ಬಾಕಿಯಿದೆ. ಉಳಿದ ಚಿತ್ರೀಕರಣ ಮುಗಿದ ಬಳಿಕ ಚಿತ್ರದ ಬಗ್ಗೆ ಚಿತ್ರತಂಡದ ಕಡೆಯಿಂದ ಹೆಚ್ಚಿನ ಮಾಹಿತಿ ಸಿಗಲಿದೆ.

Share This Article