ವರನಟ ಡಾ.ರಾಜ್ ಕುಮಾರ್ (Dr. Rajkumar) ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಇಟ್ಟುಕೊಂಡಿದ್ದರು ನಿರ್ದೇಶಕ ಎಸ್.ಕೆ.ಭಗವಾನ್ (Bhagavan). ಅಣ್ಣಾವ್ರು ಎಲ್ಲಿರುತ್ತಿದ್ದರೋ ಅಲ್ಲಿ ಭಗವಾನ್ ಇರಲೇಬೇಕಿತ್ತು. ಅಷ್ಟರ ಮಟ್ಟಿಗೆ ಡಾ.ರಾಜ್ ಕುಮಾರ್ ಜೊತೆ ಭಗವಾನ್ ಹೊಂದಿಕೊಂಡಿದ್ದರು. ಇದೀಗ ಭಗವಾನ್ ಅವರು ಅಣ್ಣಾವ್ರ ಹಾದಿಯನ್ನೇ ತುಳಿದಿದ್ದಾರೆ. ಡಾ.ರಾಜ್ ಕುಮಾರ್, ಪುನೀತ್ ರಾಜಕುಮಾರ್ (Puneeth Rajkumar) ರೀತಿಯಲ್ಲೇ ಭಗವಾನ್ ಕೂಡ ನೇತ್ರದಾನ (eye donation) ಮಾಡಿದ್ದಾರೆ.
Advertisement
ರಾಜಕುಮಾರ್ ಅವರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ ಸಂದರ್ಭದಲ್ಲೇ ಭಗವಾನ್ ಕೂಡ ತಮ್ಮ ಹೆಸರನ್ನು ನೋಂದಾಯಿಸಿದ್ದರಂತೆ. ಹಾಗಾಗಿ ಇಂದು ಅವರ ಮರಣಾನಂತರ ಕಣ್ಣಿನ ಕಾರ್ನಿಯಾವನ್ನು ತೆಗೆಯಲಾಗಿದೆ. ನಾರಾಯಣ ನೇತ್ರಾಲಯದ ಐ ಬ್ಯಾಂಕ್ ಮ್ಯಾನೇಜರ್ ವೀರೇಶ್ ಕಣ್ಣು ತೆಗೆದ ನಂತರ ಮಾತನಾಡಿ, ‘ಭಗವಾನ್ ಅವರ ಕಾರ್ನಿಯಾ ಆರೋಗ್ಯವಾಗಿದೆ. ಕಣ್ಣಿಗೆ ಯಾವುದೇ ಸಮಸ್ಯೆ ಇರಲಿಲ್ಲವಾದ್ದರಿಂದ ನಾಲ್ಕೈದು ಜನರಿಗೆ ದೃಷ್ಟಿ ಸಿಗಬಹುದು’ ಎಂದಿದ್ದಾರೆ. ಇದನ್ನೂ ಓದಿ:ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ
Advertisement
Advertisement
1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದ ಭಗವಾನ್, ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದೆ.
Advertisement
ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k